ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕಳೆದ ದಿನ ಬೆಂಗಳೂರಿನಲ್ಲಿ ಮಧ್ಯಮದಿಂದ ಭಾರೀ ಮಳೆಯಾಗಿದ್ದು, ಇಂದಿನಿಂದ ಮೇ 9ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈಗಾಗಲೇ ಮಳೆಗೆ ತತ್ತರಿಸಿರುವ ಸಿಲಿಕಾನ್ ಸಿಟಿ ಮಂದಿಗೆ ಈ ಸುದ್ದಿ ತಲೆನೋವು ತರಿಸಿದೆ.
ಇದನ್ನು ಓದಿ: ಯತ್ನಾಳ್ ಹೇಳಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಡಿಕೆ ಶಿವಕುಮಾರ್ ಆಗ್ರಹ
ಕಳೆದ ದಿನ ಬೆಂಗಳೂರಿನಲ್ಲಿ ಮಧ್ಯಮದಿಂದ ಭಾರೀ ಮಳೆಯಾಗಿದ್ದು, ಇಂದಿನಿಂದ ಮೇ 9ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಬೆಂಗಳೂರು ಪೂರ್ವ ತಾಲೂಕಿನ ಹಾಲನಾಯಕನಹಳ್ಳಿ ವ್ಯಾಪ್ತಿಯಲ್ಲಿ ಕಳೆದ ದಿನ 70.5 ಮಿ.ಮೀ ಹಾಗೂ ಆನೇಕಲ್ ತಾಲೂಕಿನ ಸಿಂಗಸಂದ್ರದ ಬಳಿಕ 68 ಮಿ.ಮೀ ಮಳೆ ದಾಖಲಾಗಿದೆ. ಡಿಫೆನ್ಸ್ ಕಾಲೋನಿ ಬಳಿಕ ಸುರಿದ ಭಾರೀ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದವು. ಪರಿಣಾಮ ಪ್ರಯಾಣಿಕರು ಓಡಾಡಲು ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಇದನ್ನು ಓದಿ: ಕೆಜಿಎಫ್ 2 ಆರ್ಭಟಕ್ಕೆ ಬೆದರಿದ ಬಾಲಿವುಡ್, ಹಿಂದಿ ಬೆಲ್ಟ್ ನಲ್ಲಿ 400 ಕೋಟಿ ರೂ. ದತ್ತ ಲಗ್ಗೆ..!
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.