ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮುಂದಿನ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ಕೆಲ ಜಿಲ್ಲೆಯಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಅರಬ್ಬಿಸಮುದ್ರದಲ್ಲಿ ಮಲ್ಮೈ  ಸುಳಿಗಾಳಿಯಿಂದಾಗಿ ಮುಂದಿನ 3
ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ : Vegetable Price: ಇಂದಿನ ತರಕಾರಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ವಿವರ


ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ 


ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.


ಸುಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ


ಮಲೆನಾಡು ಭಾಗಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದಲ್ಲಿಯೂ ಭಾರೀ ಮಳೆಯ ಮುನ್ನೆಚ್ಚ ನೀಡಲಾಗಿದ್ದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ : ವಿದ್ಯಾರ್ಥಿಗಳ ಬಸ್ ಪಾಸ್ ನವೀಕರಿಸಲು ಅವಧಿ ವಿಸ್ತರಣೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ