Heavy Rainfall : ರಾಜ್ಯದಲ್ಲಿ ಇಂದು ಮುಂದುವರೆದ ಮಳೆ ಆರ್ಭಟ : ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್!
IMD ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯ ಬಡಾಕೆರೆ ಗ್ರಾಮದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಅಪಾರ ಪ್ರಮಾಣದ ಜಮೀನು ಮಳೆ ನೀರಿನಿಂದ ಜಲಾವೃತಗೊಂಡಿದೆ.
ಬೆಂಗಳೂರು : ರಾಜ್ಯದಲ್ಲಿ ಇಂದು ಧಾರಾಕಾರ ಮಳೆ ಸುರಿಯುತ್ತಿದೆ, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಮತ್ತು ಗುಡ್ಡಗಾಡು ಜಿಲ್ಲೆಗಳ ಜತೆಗೆ ಉತ್ತರ ಕರ್ನಾಟಕದ ಜಿಲ್ಲೆಗಳೂ ಮಳೆಯ ಅಬ್ಬರಕ್ಕೆ ತುತ್ತಾಗಿವೆ. ಉತ್ತರ ಕರ್ನಾಟಕದ ಜಿಲ್ಲೆಗಳು ಪ್ರವಾಹದ ಭೀತಿ ಎದುರಿಸುತ್ತಿವೆ. ರಾಜಧಾನಿ ಬೆಂಗಳೂರು ತಂಪಾದ ಗಾಳಿ ಮತ್ತು ತುಂತುರು ಮಳೆಯಾಗುತ್ತಿದೆ.
ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಅಲರ್ಟ್ ಘೋಷಣೆ ಮಾಡ್ಲಗಿದೆ. ಕಲಬುರಗಿ ಬಿಸಿಲಿನ ತಾಪಕ್ಕೆ ಹೆಸರುವಾಸಿಯಾಗಿದ್ದು, ಪ್ರಸ್ತುತ ಗಿರಿಧಾಮದಂತಹ ವಾತಾವರಣವನ್ನು ಅನುಭವ ಶುರುವಾಗಿದೆ. ಕಲಬುರಗಿಯ ಜಿಲ್ಲಾಧಿಕಾರಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : ಅಮರನಾಥದಲ್ಲಿ ಮೇಘಸ್ಪೋಟ: ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ, ಹೆಲ್ಪ್‌ಲೈನ್ ಬಿಡುಗಡೆ
ಅಲ್ಲದೆ, ಕುಂದಾನಗರಿ ಬೆಳಗಾವಿಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಮಳೆ ಸುರಿಯುತ್ತಿದೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನ ತತ್ತರಿಸಿದ್ದಾರೆ.
ಮಲೆನಾಡು ಶಿವಮೊಗ್ಗ ಜಿಲ್ಲೆಯಾಧ್ಯಂತ ಮಳೆ ಆರ್ಭಟ ಮುಂದುವರೆದಿದೆ ಕಳೆದೊಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಮಳೆಯ ಆರ್ಭಟಕ್ಕೆ ಜಿಲ್ಲೆಯ ನದಿಗಳು, ಹಳ್ಳಕೊಳ್ಳಗಳು ಮೈದೊಂಬಿ ಹರಿಯುತ್ತಿವೆ. ತೋಟ ಹಾಗೂ ಗದ್ದೆಗಳ ತಗ್ಗು ಪ್ರದೇಶಗಳಿಗೆ ಮಳೆಯ ನೀರು ನುಗ್ಗಿದೆ.
IMD ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯ ಬಡಾಕೆರೆ ಗ್ರಾಮದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಅಪಾರ ಪ್ರಮಾಣದ ಜಮೀನು ಮಳೆ ನೀರಿನಿಂದ ಜಲಾವೃತಗೊಂಡಿದೆ.
ಇದನ್ನೂ ಓದಿ : ಸಿಎಂ ಆದ ಒಂದೇ ವರ್ಷಕ್ಕೆ ಸಿದ್ದರಾಮಯ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿತ್ತು: ಬಿಜೆಪಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ