"ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ" : ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ನಮ್ಮ ಸರ್ಕಾರ "ಸರ್ವರಿಗೂ ಸಮಪಾಲು" ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

Written by - Prashobh Devanahalli | Edited by - Manjunath N | Last Updated : Jun 6, 2023, 09:52 PM IST
  • ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ
  • ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ
  • ಸಂವಿಧಾನಬದ್ದವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ. ಇದು ಕುವೆಂಪು ಅವರು ಹೇಳಿದಂತೆ "ಸರ್ವ ಜನಾಂಗದ ಶಾಂತಿಯ ತೋಟ" ಆಗಬೇಕು
  "ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ" : ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಖಡಕ್ ಎಚ್ಚರಿಕೆ  title=
file photo

ಬೆಂಗಳೂರು : ನಮ್ಮ ಸರ್ಕಾರ "ಸರ್ವರಿಗೂ ಸಮಪಾಲು" ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ , 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲಾ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ.

ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸದಿರುವ ಪಕ್ಷ ಯಾವುದಿದೆ ಹೇಳಿ ? : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರ್ಕಾರ ನಮ್ಮದು. ನಮ್ಮ ನಾಡು ಮತ್ತು ನಮ್ಮ ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಿ ಎಂದು ನಿವೇದಿಸಿಕೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News