ಬೆಂಗಳೂರು:  ಭ್ರಷ್ಟಾಚಾರಿಗಳು, ಕ್ರಿಮಿನಲ್ಸ್ ಗಳ ಬೆನ್ನಿಗೆ ನಿಂತಿರುವ ಸರ್ಕಾರದಿಂದ ಸಚಿವ ಈಶ್ವರಪ್ಪನವರನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಅಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ವಿರುದ್ಧದ ಕಾಂಗ್ರೆಸ್ ಹೋರಾಟಕ್ಕೆ ಸಚಿವ ಈಶ್ವರಪ್ಪನವರ ರಾಜೀನಾಮೆ ಘೋಷಣೆ ಮೊದಲ ಜಯ. ಕೇವಲ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷದ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ನಮ್ಮ ಹೋರಾಟದ ಒತ್ತಾಯ, ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕ್ರಿಮಿನಲ್ ಪ್ರಕರಣದಲ್ಲಿ  ಪ್ರಮುಖ ಆರೋಪಿಯಾಗಿರುವ ಈಶ್ವರಪ್ಪನವರನ್ನ ಈ ಕೂಡಲೇ ಸರ್ಕಾರ ಬಂಧಿಸಿ, ಭ್ರಷ್ಟಾಚಾರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿ:Shehbaz Sharif on India: ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಶಹಬಾಜ್ ಷರೀಫ್


ಸಿಎಂ ಬೊಮ್ಮಾಯಿ, ಗೃಹ ಸಚಿವರು ಸೇರಿದಂತೆ ಇಡೀ ಸರ್ಕಾರ ಯಾವುದೇ ತನಿಖೆ ನಡೆಸದೇ ಈಶ್ವರಪ್ಪನವರಿಗೆ ಈಗಾಗಲೇ ಕ್ಲೀನ್ ಚಿಟ್ ನೀಡಿದೆ. ಭ್ರಷ್ಟಾಚಾರಿಗಳು, ಕ್ರಿಮಿನಲ್ಸ್ ಗಳ ಬೆನ್ನಿಗೆ ನಿಂತಿರುವ ಸರ್ಕಾರದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಕ್ರಿಮಿನಲ್ ನಂ1 ಆರೋಪಿಯಾಗಿರುವ ಈಶ್ವರಪ್ಪನವರು ಪ್ರಭಾವಿಯಾಗಿರುವುದರಿಂದ ಸಂತೋಷ್ ಪಾಟೀಲ್ ಕುಟುಂಬಸ್ಥರ ಹಾಗೂ ಸಂಬಂಧಪಟ್ಟ ಸಾಕ್ಷಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕೂಡಲೇ ಈಶ್ವರಪ್ಪನನ್ನು ಬಂಧಿಸಿ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದರು.


Kantara Teaser: ಕಾಂತಾರ ಟೀಸರ್‌ ರಿಲೀಸ್‌! ದೆವ್ವದ ಕಥೆ ಹೇಳಲು ಬರುತ್ತಿದ್ದರಾ ರಿಷಬ್ ಶೆಟ್ಟಿ?


ಇಡೀ ಸರ್ಕಾರವೇ 40% ಕಮಿಷನ್ ನಡೆಸುತ್ತಿದೆ, ದಾಖಲೆ ಬಿಡುಗಡೆ ಮಾಡಲು ಸಿದ್ದ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯನವರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಕುರಿತಾಗಿಯೂ ತನಿಖೆ ನಡೆಸಬೇಕಿದೆ. ಭ್ರಷ್ಟಾಚಾರದ ವಿರುದ್ಧ, ಕ್ರಿಮಿನಲ್ ಸಚಿವರುಗಳ ವಿರುದ್ಧ ನಮ್ಮ‌ಹೋರಾಟ ಮುಂದುವರೆಯುತ್ತದೆ ಎಂದು ಹರಿಪ್ರಸಾದ್ ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.