ಎಲ್ಲಾ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Congress 5 Guarantee Schemes: ಜೂನ್ 1ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ 5 ಯೋಜನೆಗಳ ರೂಪುರೇಷೆಗಳು, ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ.

Written by - Prashobh Devanahalli | Edited by - Puttaraj K Alur | Last Updated : May 31, 2023, 04:34 PM IST
  • ಕಾಂಗ್ರೆಸ್‍ನ 5 ಗ್ಯಾರಂಟಿ ಯೋಜನೆ ಜಾರಿಗೆ ಸಚಿವರು & ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ
  • ಜೂನ್ 1ರ ಸಚಿವ ಸಂಪುಟ ಸಭೆಯಲ್ಲಿ ಈ 5 ಯೋಜನೆಗಳ ರೂಪುರೇಷೆ, ಮಾರ್ಗಸೂಚಿ ಅಂತಿಮ
  • 5 ಗ್ಯಾರಂಟಿ ಯೋಜನೆ ಜಾರಿಗೆ ವಾರ್ಷಿಕ 50 ಸಾವಿರ ಕೋಟಿ ರೂ. ಬೇಕಾಗುತ್ತದೆ
ಎಲ್ಲಾ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಮುಖ್ಯಮಂತ್ರಿ ಸಿದ್ದರಾಮಯ್ಯ title=
5 ಗ್ಯಾರಂಟಿ ಯೋಜನೆ ಜಾರಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ  ಯೋಜನೆಗಳನ್ನು  ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಜೂನ್ 1ರಂದು ನಡೆಯಲಿರುವ  ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ‍ಗ್ಯಾರಂಟಿ ಯೋಜನೆಗಳ ಜಾರಿಯ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರಿಗೆ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಯ ಅಧಿಕಾರಿಗಳು, ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ಎಲ್ಲಾ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ: ಮೀಸಲಾತಿ ಹೆಸರಲ್ಲಿ ಮೇಯರ್ ಕನಸು ಕಂಡ ಬಿಜೆಪಿಗೆ ಮುಖಭಂಗ!

ಜೂನ್ 1ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ 5 ಯೋಜನೆಗಳ ರೂಪುರೇಷೆಗಳು, ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ. ಸಿಎಂ ಸಿದ್ದರಾಮಯ್ಯನವರು 5 ಇಲಾಖೆಯ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯೋಜನೆ ಅನುಷ್ಠಾನಕ್ಕೆ ವೆಚ್ಚವಾಗುವ ಹಣದ ಮಾಹಿತಿಯನ್ನು ಪಡೆದುಕೊಂಡಿದ್ದರು. ಈ ಸಭೆಯಲ್ಲಿ ಭಾಗಿಯಾಗಿದ್ದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳು ಈ 5 ಗ್ಯಾರಂಟಿ ಯೋಜನೆ ಜಾರಿಗೆ ವಾರ್ಷಿಕ 50 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

5 ಗ್ಯಾರಂಟಿ  ಯೋಜನೆಗಳು

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ, ಪಡಿತರ ವ್ಯವಸ್ಥೆಯಲ್ಲಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಯೋಜನೆ ಹಾಗೂ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು.

ಇದನ್ನೂ ಓದಿ: ನಳಂದಾ ಕಾಲೇಜು ಬಳಿ ಭೀಕರ ಅಪಘಾತ; ಬೈಕ್ ಸವಾರನ ತಲೆ ಹೋಳು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News