ನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ
CM Siddaramaiah: ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ. ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೆಟ್ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು : ನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತೆ. ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ. ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೆಟ್ ತೆಗೆದುಕೊಳ್ಳಬೇಕು. ನಾಳೆ ಮಧ್ಯಾಹ್ನ 1 ಗಂಟೆಯಿಂದ ಯೋಜನೆ ಚಾಲನೆ ಆಗುತ್ತೆ. ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಏಕಕಲಾದಲ್ಲಿ ಜಾರಿಯಾಗಲಿದೆ ಎಂದು ಮೈಸೂರಿನ ಸುತ್ತೂರು ಹೆಲಿಪ್ಯಾಡ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ವರುಣ ತಾಲೂಕು ಕೇಂದ್ರ ಬೇಡಿಕೆ ವಿಚಾರವಾಗಿ ಮಾತನಾಡಿದ ಅವರು, ಜನ ವರುಣ ತಾಲೂಕು ಮಾಡಿ ಅಂತ ಕೇಳಿಲ್ಲ. ಬಿಜೆಪಿ ಮತ್ತು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದು. ನಾನು ಮೂರು ದಿನ ಪ್ರಚಾರದಲ್ಲಿ ಎಲ್ಲೂ ಜನ ಕೇಳಿಲ್ಲ. ಬಸವರಾಜ ಬೊಮ್ಮಾಯಿ ಹೇಳಿದ್ರೆ ಮಾಡಲ್ಲ. ಜನ ಕೇಳಿದ್ರೆ ಬೇಕಾದ್ರೆ ಮಾಡುತ್ತೇನೆ ಎಂದರು. ರಾಜ್ಯದ ಜಿಎಸ್‌ಟಿ ಪಾಲಿಗೆ ಒತ್ತಾಯ ವಿಚಾರ, ನ್ಯಾಯಯುತವಾಗಿ ಕೇಂದ್ರದಿಂದ ನಮಗೆ ಬೇಕಾದ ಹಣವನ್ನ ಒತ್ತಾಯ ಪೂರ್ವಕವಾಗಿ ಕೇಳುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ನಾರಿಯರೇ ನಾಳೆಯಿಂದ ಬಸ್‌ನಲ್ಲಿ ಫ್ರೀಯಾಗಿ ಪ್ರಯಾಣಿಸಿ..! ಉಚಿತ ಖಚಿತವಾಗಿದೆ..
40% ಆರೋಪ ತನಿಖೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ನನ್ನ ಇಲಾಖೆಯಿಂದಲೇ ತನಿಖೆ ಆರಂಭಿಸಿ ಎಂಬ ಮಾಜಿ ಸಚಿವ ಶ್ರೀನಿವಾಸ್ ಪೂಜಾರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರೋ ಹೇಳಿದ್ರು ಅಂತ ತನಿಖೆ ಮಾಡಲು ಆಗಲ್ಲ.
ಅದನ್ನ ನಾವು ಶ್ರೀನಿವಾಸ್ ಪೂಜಾರಿ, ಬಸವರಾಜ ಬೊಮ್ಮಾಯಿ ಕೇಳಿ ಮಾಡಬೇಕಾ? ಪಿಎಸ್‌ಐ ತನಿಖೆ ಈಗಾಗಲೇ ನಡೆಯುತ್ತಿದೆ. ಎಡಿಜಿಪಿ ಅಮೃತ್ ಪೌಲ್ ಜೈಲಿನಲ್ಲಿದ್ದಾರೆ ಎಂದರು.
ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಸೋಮವಾರ ಕುಡಿಯುವ ನೀರಿನ ಸಂಬಂಧ ಅಧಿಕಾರಿಗಳ ಸಭೆ ಕರೆದಿದ್ದೇನೆ. ಮಳೆ ಸಮಸ್ಯೆ ಇರುವ ಜಿಲ್ಲಾಧಿಕಾರಿಗಳ ಜೊತೆ ಕೂಡ ವೀಡಿಯೋ ಕಾನ್ಫರೆನ್ಸ್ ಮಾಡುವೆ. ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಲಾಂಚ್ ಆಗುತ್ತೆ. ಜುಲೈ 1 ರಂದೇ ಹತ್ತು ಕೆಜಿ ಆಹಾರ ಧಾನ್ಯ ಕೊಡುವ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಿದ್ದೇವೆ.
ಜುಲೈ 16 ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಆಗುತ್ತೆ. 2022-23ರಲ್ಲಿ ಪಾಸ್ ಆದ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು 24 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಹಣ. ಮಧ್ಯೆ ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕರೆ ಅವರಿಗೆ ಹಣ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: ಮನೆಯ ಹಿತ್ತಲಿನಲ್ಲಿ ಅಡಗಿದ್ದವು 25 ನಾಗರ ಹಾವುಗಳು, ನೆಲದ ಅಡಿಯಿಂದ ಮೇಲೆದ್ದ ರಾಶಿ ರಾಶಿ ಉರಗಗಳು!
ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ವಿಚಾರವಾಗಿ ಮಾತನಾಡಿ, ಸರ್ಕಾರದ ತಲೆನೋವು ನಿಮಗ್ಯಾಕೆ. ನಾವು ಹೇಳಿದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು.
ವಿದ್ಯುತ್ ದರವನ್ನ ಪ್ರತಿ ವರ್ಷ ರೆಗ್ಯುಲೇಟರಿ ಕಮಿಷನ್ ದರ ಪರಿಷ್ಕರಣೆ ಮಾಡುತ್ತೆ. ಜೂನ್ 1 ರಿಂದ ಜಾರಿ ಮಾಡುತ್ತಾರೆ. ನಾವು ಅಧಿಕಾರಕ್ಕೆ ಬರುವ ಮುಂಚಿತವಾಗಿ ವಿದ್ಯುತ್ ದರ ಪರಿಷ್ಕರಣೆ ಆಗಿದೆ. ಚುನಾವಣೆ ನೀತಿ ಸಂಹಿತೆಯಿಂದ ತಡೆ ಆಗಿತ್ತು. ಜೂನ್ ತಿಂಗಳಿಂದ ಅದು ಜಾರಿ ಆಗಿದೆ. ವಿರೋಧ ಪಕ್ಷಗಳ ಜೊತೆಗೆ ಮಾದ್ಯಮಗಳೂ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಚಿತ ವಿದ್ಯುತ್ ಬೇಡ ಅಂದವರಿಗೆ ಬಲವಂತ ಮಾಡುತ್ತಿಲ್ಲ. ಸರಾಸರಿ ಬಳಕೆ ಆಧಾರದಲ್ಲಿ ಶೇಕಡ 10 ವಿದ್ಯುತ್ ನೀಡುತ್ತೇವೆ. ಸುಮ್ಮನೆ ದುಂದು ವೆಚ್ಚ ಮಾಡಲು ಪೂರ್ತಿ 200 ಕೊಡಕಾಗುತ್ತಾ. ಟಿವಿಗಳಲ್ಲಿ ದಿನವಿಡಿ 200 ಯುನಿಟ್ ಬಗ್ಗೆ ಇದೇ ಚರ್ಚೆ. ನಾನು ಏನ್ ಹೇಳಿದ್ದೇವೆ ಅದನ್ನೇ ಮಾಡುತ್ತೇವೆ. ಬಿಜೆಪಿಯವರಂತೆ ಸುಳ್ಳು ಹೇಳುವುದಿಲ್ಲ. ನಾನು ಅಧಿಕಾರ ಇರಲಿ, ಇಲ್ಲದಿರಲಿ ಒಂದೇ ರೀತಿ ಇರುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಒಂದು ದಿನದ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ ! ರೂಟ್ ನಂ.43ರಲ್ಲಿ ಟಿಕೆಟ್ ಹರಿಯಲಿರುವ ಮುಖ್ಯಮಂತ್ರಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.