ಆಗಸ್ಟ್ 16ರಿಂದ ‘ಗೃಹಲಕ್ಷ್ಮೀ’ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Gruha Lakshmi Scheme: ಜುಲೈ 14ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Written by - Puttaraj K Alur | Last Updated : Jul 2, 2023, 08:11 PM IST
  • ಆಗಸ್ಟ್ 16ರಿಂದ ‘ಗೃಹಲಕ್ಷ್ಮೀ’ ಯೋಜನೆ ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
  • ಮನೆ ಒಡತಿಯರ ಖಾತೆಗೆ 2 ಸಾವಿರ ರೂ. ಹಾಕುವ ಮಹತ್ವದ ಯೋಜನೆಗೆ ಆ.16ರಂದು ಚಾಲನೆ ಸಿಗಲಿದೆ
  • ಜುಲೈ 14ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವೆಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಆಗಸ್ಟ್ 16ರಿಂದ ‘ಗೃಹಲಕ್ಷ್ಮೀ’ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ  title=
ಆ.16ರಿಂದ ‘ಗೃಹಲಕ್ಷ್ಮೀ’ ಯೋಜನೆ ಜಾರಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 3 ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಇದೀಗ ಮನೆ ಒಡತಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮಿ’ ಯೋಜನೆ ಯಾವಾಗ ಜಾರಿಯಾಗುತ್ತೆ ಎಂದು ಜನರು ಕಾಯ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನ ಕೇತೋಹಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಆಗಸ್ಟ್ 16ರಿಂದ ‘ಗೃಹಲಕ್ಷ್ಮೀ’ ಯೋಜನೆ ಜಾರಿಯಾಗಲಿದೆ ಅಂತಾ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಒಡತಿಯರ ಖಾತೆಗೆ 2 ಸಾವಿರ ರೂ. ಹಾಕುವ ಮಹತ್ವದ ಯೋಜನೆಗೆ ಆ.16ರಂದು ಚಾಲನೆ ಸಿಗಲಿದೆ’ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ. ನಮ್ಮದು ‘ನುಡಿದಂತೆ ನಡೆವ ಸರ್ಕಾರ’ವೆಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕೆಸಿಎನ್ ಮೋಹನ್ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಶೋಕ..!

ಜುಲೈ 14ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರು

ಜುಲೈ 14ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಣೆ ಮಾಡುತ್ತೇವೆ. ಆಗಸ್ಟ್ ತಿಂಗಳಿಂದ ಮನೆ ಯಜಮಾನಿಯ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಜುಲೈ 14ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‍ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದು ಹೇಳಿದರು.

ಇದನ್ನೂ ಓದಿ: "ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ. ಅವರ ನಿಜವಾದ ಬಣ್ಣ ಬಯಲಾಗುತ್ತಿದೆ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News