ಬೆಂಗಳೂರು: ಸ್ವಂತ ಸೂರು ಇಲ್ಲದೆ ಬೆಂಗಳೂರು ನಗರದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿರುವ ಬಡ ಕುಟುಂಬಗಳಿಗಾಗಿ ಶೀಘ್ರವೇ ಮುಖ್ಯಮಂತ್ರಿಯವರ ಒಂದು ಲಕ್ಷ ವಸತಿ ಯೋಜನೆ ಜಾರಿಗೆ ಬರಲಿದೆ. 


COMMERCIAL BREAK
SCROLL TO CONTINUE READING

* ಒಂದು ಲಕ್ಷ ಮನೆಗಳ ನಿರ್ಮಾಣಕ್ಕೆ 1,100 ಎಕರೆ ಜಮೀನಿನ ಅಗತ್ಯವಿದೆ. ಇದಕ್ಕಾಗಿ ವಿವಿಧೆಡೆಗಳಲ್ಲಿ ಜಾಗ ಗುರುತಿಸಲಾಗಿದೆ. ನಗರದಲ್ಲಿ ಈಗಾಗಲೇ ಒತ್ತುವರಿ ತೆರವು ಮಾಡಿ ಸಾವಿರಾರು ಎಕರೆ ಭೂಮಿಯನ್ನು ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಅಲ್ಲಿ ಬಡವರಿಗಾಗಿ ಮನೆಗಳನ್ನು ನಿರ್ಮಿಸಲಾಗುವುದು.


ನೆಲಮಹಡಿ ಸೇರಿದಂತೆ ಮೂರು ಅಂತಸ್ತಿನಲ್ಲಿ (ಜಿ+3) ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು. ಅಗತ್ಯವಾದ ಭೂಮಿಯನ್ನು ರಾಜೀವ್‍ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಂದಿನ ಸಭೆಯಲ್ಲಿ ಸೂಚಿಸಲಾಗಿದೆ.


* ಈಗಾಗಲೇ 430 ಎಕರೆ ಜಾಗವನ್ನು ಗುರುತಿಸಿದ್ದು, ನಿಗಮದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಮಹಾನಗರದಲ್ಲಿ ಐದಕ್ಕಿಂತ ಹೆಚ್ಚು ವರ್ಷದಿಂದ ವಾಸ ಮಾಡುತ್ತಿರುವ ಹಾಗೂ ವಸತಿ ರಹಿತರಾಗಿರುವ, ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳವರು (ಬಿಪಿಎಲ್) ಯೋಜನೆಯ ಫಲಾನುಭವಿಗಳಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 


* ಫಲಾನುಭವಿಗಳಿಂದ ನವೆಂಬರ್ 15ರಿಂದ ಆನ್‍ಲೈನ್ ಮೂಲಕ ಅರ್ಜಿ ಹಾಕಬಹುದು.  


* ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಶೇ.80ರಷ್ಟು ಮಂದಿಗೆ ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ವ್ಯಾಪ್ತಿಯಲ್ಲಿರುವ (ಬಿಎಂಆರ್‍ಡಿಎ) ಶೇ. 20ರಷ್ಟು ಮಂದಿ ಯೋನೆಯ ಲಾಭ ಪಡೆದುಕೊಳ್ಳಬಹುದು. 


* ಒಂದು ಮನೆಗೆ 5.50 ಲಕ್ಷ ರೂ. ವೆಚ್ಚವಾಗಲಿದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದವರಿಗೆ ಒಂದು ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ 50 ಸಾವಿರ ರೂ. ನಿಗದಿಯಾಗಿದೆ. 
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 2.70 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ 3.70 ಲಕ್ಷ ರೂ.ಗಳವರೆಗೆ ಸಬ್ಸಿಡಿ ರೂಪದಲ್ಲಿ ನೆರವು ಸಿಗಲಿದೆ. ಉಳಿದ ಮೊತ್ತವನ್ನು ಬ್ಯಾಂಕ್‍ಗಳಿಂದ ಸಾಲ ಪಡೆಯಲು ಅವಕಾಶ ಸಿಗಲಿದೆ.