ಡಿಸೆಂಬರ್ ನಲ್ಲಿ ರಾಜ್ಯಕ್ಕೆ ಉ.ಪ್ರ ಸಿಎಂ ಯೋಗಿ ಆದಿತ್ಯನಾಥ್ ಆಗಮನ ಸಾಧ್ಯತೆ!

ಯೋಗಿ ಆದಿತ್ಯನಾಥ್ ಡಿ.10 ರಂದು ಆದಿ ಚುಂಚನಗಿರಿಗೆ ಆಗಮಿಸಲಿದ್ದಾರೆ ಎಂಬ ಮಾತುಗಳು ಮಂಡ್ಯ ಜಿಲ್ಲೆಯಲ್ಲಿ ಕೇಳಿಬರುತ್ತಿವೆ.

Updated: Nov 28, 2017 , 09:57 AM IST
ಡಿಸೆಂಬರ್ ನಲ್ಲಿ ರಾಜ್ಯಕ್ಕೆ ಉ.ಪ್ರ ಸಿಎಂ ಯೋಗಿ ಆದಿತ್ಯನಾಥ್ ಆಗಮನ ಸಾಧ್ಯತೆ!

ಮಂಡ್ಯ: ಮೂರು ದಿನಗಳ ಹಿಂದೆಯಷ್ಟೇ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಡಿ.21 ರಂದು ಹುಬ್ಬಳ್ಳಿಯಲ್ಲಿ ದೊಡ್ಡ ಪರಿವರ್ತನಾ ರ್ಯಾಲಿ ನಡೆಯಲಿದೆ. ಆ ಸಮಯದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಸಿಎಂ ಯೋಗಿ ಡಿ.10 ರಂದು ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಆಗಮಿಸಲಿದ್ದಾರೆ ಎಂಬ ಗುಮಾನಿ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ.

ಡಿ. 10 ರಂದು ಆದಿಚುಂಚನಗಿರಿಯಲ್ಲಿ ಕಾಲ ಭೈರವನ ನವನಾಥ ಸಂಭ್ರಮ ಮತ್ತು ಮಾಲೆ ವೃತ್ತದ ಹಿನ್ನೆಲೆಯಲ್ಲಿ ಯೋಗಿ ಭೇಟಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಯೋಗಿ ಅವರ ಭೇಟಿ ಅಧಿಕೃತಗೊಂಡ ನಂತರವಷ್ಟೇ ಆ ಬಗ್ಗೆ ಮಾಹಿತಿ ನೀಡುವುದಾಗಿ ಮಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ತಿಳಿಸಿದ್ದಾರೆ.