Contaminated Water: ಕಲುಷಿತ ನೀರು ಸೇವನೆ  : 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

Contaminated Water Consumption In Raichur: ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿ, 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರಿನ ಸೇವನೆಯಿಂದ ಓರ್ವ ಬಾಲಕ ಮೃತಪಟ್ಟು ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

Written by - Zee Kannada News Desk | Last Updated : May 28, 2023, 02:54 PM IST
  • ಕಲುಷಿತ ನೀರಿನ ಸೇವನೆಯಿಂದ ಓರ್ವ ಬಾಲಕ ಮೃತ, ಹಲವರು ಅಸ್ವಸ್ಥ
  • ಘಟನೆಗೆ ಗ್ರಾ.ಪಂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರ ಆರೋಪ
  • ಚರಂಡಿ ನೀರಿನ ಪೈಪ್​ ಒಡೆದು ಕುಡಿಯುವ ನೀರಿನೊಂದಿಗೆ ಮಿಶ್ರಣ
Contaminated Water: ಕಲುಷಿತ ನೀರು ಸೇವನೆ  : 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ! title=

ರಾಯಚೂರು: ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿ, 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರಿನ ಸೇವನೆಯಿಂದ ಓರ್ವ ಬಾಲಕ ಮೃತಪಟ್ಟು ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರಿನ ಘಟನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆದೇಶಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದೂರವಾಣಿ ಮೂಲಕ ಸಿಇಒ ಅವರೊಂದಿಗೆ ಮಾತನಾಡಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದನ್ನೂ ಓದಿ: University:ಮಗಳ ಹುಟ್ಟು ಹಬ್ಬಕ್ಕೆ ಸರ್ಕಾರದ ಲೆಟರ್‌ ಹೆಡ್‌ನಲ್ಲೇ ಆಹ್ವಾನ ಹೊರಡಿಸಿದ ಕುಲಪತಿ..!

ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಜನ ಅಸ್ವಸ್ಥರಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಕಲುಷಿತ ನೀರಿಗೆ ಸಂಬಂಧಸಿದಂತೆ  ಸಿಇಒ ಅವರೊಂದಿಗೆ ಮಾತನಾಡಿದ  ಮುಖ್ಯಮಂತ್ರಿ ಸಿದ್ದರಾಮಯ್ಯ,  ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಿಸುವುದರ ಜೊತೆಗೆ  ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ. 

ಇದನ್ನೂ ಓದಿ: Government Schools: ವಿದ್ಯಾರ್ಥಿಗಳನ್ನು ಖಾಸಗಿ ಕಾಲೇಜಿಗೆ ತಳ್ಳುತ್ತಿರುವ ಸರ್ಕಾರಿ ಶಿಕ್ಷಕರು: ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳು !?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News