ಚೆನ್ನವೀರ ಕಣವಿ ಹೆಸರಿನಲ್ಲಿ ಕವಿವಿ ಹಾಗೂ ಎಸ್‍ಡಿಎಂನಲ್ಲಿ ಚಿನ್ನದ ಪದಕಗಳ ಸ್ಥಾಪನೆ

ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‍ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸ್ವರ್ಣಪದಕಗಳನ್ನು ಸ್ಥಾಪಿಸಲಾಗುವುದು ಎಂದು ಅವರ ಪುತ್ರ ಪ್ರಿಯದರ್ಶಿ ಕಣವಿ ತಿಳಿಸಿದ್ದಾರೆ.

Written by - Zee Kannada News Desk | Last Updated : Mar 29, 2022, 07:34 PM IST
  • ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‍ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸ್ವರ್ಣಪದಕಗಳನ್ನು ಸ್ಥಾಪಿಸಲಾಗುವುದು ಎಂದು ಅವರ ಪುತ್ರ ಪ್ರಿಯದರ್ಶಿ ಕಣವಿ ತಿಳಿಸಿದ್ದಾರೆ.
 ಚೆನ್ನವೀರ ಕಣವಿ ಹೆಸರಿನಲ್ಲಿ ಕವಿವಿ ಹಾಗೂ ಎಸ್‍ಡಿಎಂನಲ್ಲಿ ಚಿನ್ನದ ಪದಕಗಳ ಸ್ಥಾಪನೆ title=

ಧಾರವಾಡ: ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‍ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸ್ವರ್ಣಪದಕಗಳನ್ನು ಸ್ಥಾಪಿಸಲಾಗುವುದು ಎಂದು ಅವರ ಪುತ್ರ ಪ್ರಿಯದರ್ಶಿ ಕಣವಿ ತಿಳಿಸಿದ್ದಾರೆ.

ಇದನ್ನೂ ಓದಿ: SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ, ವಿದ್ಯಾರ್ಥಿನಿ ಸಾವು

ಕಳೆದ ಜನವರಿ 14 ರಿಂದ ಫೆ.16 ವರೆಗೆ ಡಾ.ಚೆನ್ನವೀರ ಕಣವಿ (Chennaveera Kanavi) ಅವರು ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿಯವರು (Basavaraj Bommai), ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಎಸ್‍ಡಿಎಂ ಆಸ್ಪತ್ರೆಯ ನಿರ್ದೇಶಕರು, ವೈದ್ಯರು, ಸಿಬ್ಬಂದಿ ನೀಡಿದ ಸಹಕಾರ, ತುಂಬಿದ ನೈತಿಕ ಸ್ಥೈರ್ಯಕ್ಕೆ ಕುಟುಂಬ ಋಣಿಯಾಗಿದೆ.

ಇದನ್ನೂ ಓದಿ: ದೇವಸ್ಥಾನ ಕಟ್ಟಿದವರು ಓಬಿಸಿ, ದಲಿತರು; ಆದರೂ ಮಜಾ ಮಾಡುವವರು ನೀವು..! 

ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲು ಘೋಷಿಸಿದ್ದರಿಂದ, ಅದಕ್ಕಾಗಿ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾರ್ವಜನಿಕ ಕಾರ್ಯಕ್ಕೆ ಸದ್ವಿನಿಯೋಗ ಮಾಡಲು ಉದ್ದೇಶಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತರನ್ನು ಪ್ರೊತ್ಸಾಹಿಸಲು ಕರ್ನಾಟಕ ವಿವಿ ಹಾಗೂ ಎಸ್‍ಡಿಎಂ ಡೀಮ್ಡ್ ವಿವಿಯಲ್ಲಿ ನಿಧಿ ಸ್ಥಾಪನೆ ಮಾಡಿ, ಸ್ವರ್ಣಪದಕಗಳನ್ನು ನೀಡಲು ಕುಟುಂಬದ ಸದಸ್ಯರು ತೀರ್ಮಾನಿಸಿದ್ದಾರೆ. ಕಣವಿ ಅವರ ಅನಾರೋಗ್ಯದ ಸಂದರ್ಭದಲ್ಲಿ ಅವರಿಗಾಗಿ ಮಿಡಿದ ನಾಡಿನ ಸಮಸ್ತ ಜನತೆಗೆ, ಮಾಧ್ಯಮಗಳಿಗೆ, ಮಠಾಧೀಶರಿಗೆ  ಕೃತಜ್ಞತೆಗಳನ್ನು ಕುಟುಂಬ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News