ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಹುನ್ನಾರ: ಬಸವರಾಜ ಬೊಮ್ಮಾಯಿ

ಪ್ರಸ್ತುತ ದೇಶದಲ್ಲಿ ಜಾತಿ ಗಣತಿ ಎಂಬುದು ರಾಜಕೀಯ ಅಸ್ತ್ರವಾಗುತ್ತಿರುವುದು ದೊಡ್ಡ ದುರಂತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅಭಿಪ್ರಾಯ ವ್ಯಕ್ತಪಡಿಸಿದರು.

Written by - Prashobh Devanahalli | Edited by - Manjunath N | Last Updated : Dec 25, 2023, 12:26 AM IST
  • ಎಲ್ಲಾ ಸಮುದಾಯಗಳಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಜಾತಿ ಗಣತಿ ಬೇಕು.
  • ಆದರೆ ಈಗ ಆಗುತ್ತಿರುವುದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಗಣತಿಯ ಸದ್ದು ಮಾಡುತ್ತಿದೆ.
  • ಇದಕ್ಕೆ ಅವಕಾಶ ನೀಡಬಾರದು.
 ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಹುನ್ನಾರ: ಬಸವರಾಜ ಬೊಮ್ಮಾಯಿ title=
file photo

ದಾವಣಗೆರೆ: ಪ್ರಸ್ತುತ ದೇಶದಲ್ಲಿ ಜಾತಿ ಗಣತಿ ಎಂಬುದು ರಾಜಕೀಯ ಅಸ್ತ್ರವಾಗುತ್ತಿರುವುದು ದೊಡ್ಡ ದುರಂತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿ ಭಾನುವಾರ ಆಯೋಜಿಸಿದ್ದ ನೌಕರರ ಮತ್ತು ಸಾಹಿತ್ಯ  ಅಧಿವೇಶನದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: ಡಿವೋರ್ಸ್ ಸುದ್ದಿ ಬೆನ್ನಲೇ ಪಬ್ಲಿಕ್’ನಲ್ಲೇ ಜಗಳವಾಡಿದ ಅಭಿಷೇಕ್-ಐಶ್ವರ್ಯಾ ರೈ!

ಎಲ್ಲಾ ಸಮುದಾಯಗಳಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಜಾತಿ ಗಣತಿ ಬೇಕು. ಆದರೆ ಈಗ ಆಗುತ್ತಿರುವುದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಗಣತಿಯ ಸದ್ದು ಮಾಡುತ್ತಿದೆ. ಇದಕ್ಕೆ ಅವಕಾಶ ನೀಡಬಾರದು. ರಾಜಕಾರಣ ಮಾಡಲು ಹಲವಾರು ಮಾರ್ಗಗಳು ಇವೆ ಎಂದರು.ಇತ್ತೀಚಿನ ದಿನಗಳಲ್ಲಿ ಜಾತಿ ಗಣತಿ ಹೆಸರಿನಲ್ಲಿ ಸಮಾಜ ಬೇರ್ಪಡಿಸುವ ಹುನ್ನಾರ ನಡೆಯುತ್ತದೆ.  ಜಾತಿ ಗಣತಿ ಬಗ್ಗೆ ಸ್ಪಷ್ಟ ನೀತಿ ಇರಬೇಕು. ಈಗ ಕರ್ನಾಟಕದಲ್ಲಿ ಜಾತಿ ಗಣತಿ ನಡೆದಿದೆ, ಅದು ಜಾತಿ ಗಣತಿಯಲ್ಲ. ಯಾವ್ಯಾವ ಸನುದಾಯದಲ್ಲಿ ಶಿಕ್ಷಣ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವರದಿ ತಯಾರಿ ಮಾಡಲಾಗಿದೆ. ಆದರೆ ಅದನ್ನೇ ಜಾತಿ ಗಣತಿ ಎಂದು ಆದೇಶ ಹೊರಡಿಸಲು ಸರ್ಕಾರ ಮುಂದಾಗಿದೆ‌. ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ ಎಂದು ಸುಪ್ರೀಂ ಕೋಟ್೯ ಹಲವಾರು ಬಾರಿ ಪ್ರಸ್ತಾಪ ಮಾಡಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News