ಶಿಕ್ಷಣ- ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಇಂದು ಉದ್ಘಾಟಿಸಲಾಗಿದೆ.  ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು.

Written by - Yashaswini V | Last Updated : Dec 18, 2023, 02:35 PM IST
  • ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ.
  • ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ.
  • ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದರು.
ಶಿಕ್ಷಣ- ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು: ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು  ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು ಎಂದರು. 

ಇದನ್ನೂ ಓದಿ- ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ,-ಸಿಎಂ ಸಿದ್ದರಾಮಯ್ಯ

ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯ :
ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಇಂದು ಉದ್ಘಾಟಿಸಲಾಗಿದೆ.  ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು. ಕಡೆಯ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದಾಗ, ಕಾಯಿಲೆ ಉಲ್ಬಣಗೊಳ್ಳದಿರಲು ಈ ಅತ್ಯಾಧುನಿಕ ಚಿಕಿತ್ಸೆ ಸಹಕಾರಿಯಾಗಿದೆ. ಈ  ಆಸ್ಪತ್ರೆಗೆ ಹಳ್ಳಿಗಾಡಿನ ಜನರು ಹೆಚ್ಚು ಬರುವುದರಿಂದ ಇಲ್ಲಿನ ವೈದ್ಯರು ಕನ್ನಡದಲ್ಲಿ ಮಾತನಾಡುವುದರಿಂದ ರೋಗಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ತಿಳಿಸಿದರು. 

ಇದನ್ನೂ ಓದಿ- ಜೋಶಿ ಬೇರೆ ಕಡೆ ಹೋದರೆ ನಾವು ಟಿಕೆಟ್‌ ಕೇಳ್ಬೊದು : ಪ್ರದೀಪ್‌ ಶೆಟ್ಟರ್‌

ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ :
ಶ್ರೀಮಂತರು ಉತ್ತಮ ಹಾಗೂ ದುಬಾರಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ದಿನನಿತ್ಯ ಜೀವನದಕ್ಕಾಗಿ ಹೋರಾಡುವ ಬಡಜನರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ ನೀಡುವ ಬ್ಯಾಪ್ಟಿಸ್ಟ್ ಆಸ್ಪತ್ರೆ ಜನಸೇವೆಯಲ್ಲಿ ನಂಬಿಕೆ ಇರಿಸಿದೆ. ಬ್ಯಾಪ್ಟಿಸ್ಟ್ ಆಸ್ಪತ್ರೆಯು ಬಡವರಿಗೆ ಕೈಗೆಟಕುವ  ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ. ಸರ್ಕಾರಿ ಆಸ್ಪತ್ರೆಯಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು, ಸರ್ಕಾರ ಈ ಆಸ್ಪತ್ರೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News