Chikkmagaluru : ಬಾಬಾಬುಡನ್ ಸ್ವಾಮಿ ದರ್ಗಾ ವಿವಾದ : ರಾಜ್ಯ ಸರ್ಕಾರದಿಂದ ಆಡಳಿತ ಮಂಡಳಿ ರಚನೆ 

ತಾಲ್ಲೂಕಿನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ, ಪೀಠಕ್ಕೆ 8 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

Written by - Channabasava A Kashinakunti | Last Updated : Nov 18, 2022, 09:07 PM IST
  • ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ
  • ಪೀಠಕ್ಕೆ 8 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ
  • ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
Chikkmagaluru : ಬಾಬಾಬುಡನ್ ಸ್ವಾಮಿ ದರ್ಗಾ ವಿವಾದ : ರಾಜ್ಯ ಸರ್ಕಾರದಿಂದ ಆಡಳಿತ ಮಂಡಳಿ ರಚನೆ  title=

ಚಿಕ್ಕಮಗಳೂರು : ತಾಲ್ಲೂಕಿನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ, ಪೀಠಕ್ಕೆ 8 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ವ್ಯವಸ್ಥಾಪನಾ ಸಮಿತಿಯಲ್ಲಿ ಕೆ.ಸತೀಶ್, ಸಿ.ಜಿಲೀಲಾ, ಶೀಲಾ, ಎನ್.ಎಸ್.ಸುಮಂತ್, ಕೆ.ಎಸ್.ಗುರುವೇಶ್, ಜಿ. ಎಚ್.ಹೇಮಂತ್‌ಕುಮಾರ್, ಎಸ್.ಎಂ.ಭಾಷಾ, ಸಿ.ಎಸ್.ಚೇತನ್ ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸದಸ್ಯ ಕಾರ್ಯದರ್ಶಿ ರೋಹಿಣ  ಸಿಂಧೂರಿ ಆದೇಶದಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ : ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಚುನಾವಣೆಯಲ್ಲಿ ಸೋಲುವ ಭಯಕ್ಕೆ ಬಿಜೆಪಿಯಿಂದ ಕೃತ್ಯ- ಡಿಕೆಶಿ

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಲು 42 ಅರ್ಜಿಗಳು ಬಂದಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಪರಿಶೀಲನೆ ನಡೆಸಿ ಸತ್ಯಾಪನಾ ವರದಿ ಸಲ್ಲಿಸಿದ ಆಧಾರದ ಮೇಲೆ ಈ ಮೇಲ್ಕಂಡವರನ್ನು ಆಯ್ಕೆ ಮಾಡ ಲಾಗಿದೆ ಎಂದು ತಿಳಿಸಿದ್ದಾರೆ.

ಸದಸ್ಯರು ರಾಜಕೀಯ ಪಕ್ಷದ ಪದಾಧಿಕಾರಿಗಳು ಎಂದು ಕಂಡು ಬಂದಲ್ಲಿ ಅಂತವರ ಸದಸ್ಯತ್ವ ರದ್ದಾಗಲಿದೆ. ದೇವಾಲಯದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸದಸ್ಯರು ತಮ್ಮ ಪ್ರಥಮ ಸಭೆಯಲ್ಲಿ ಸಮಿತಿಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಈ ಆದೇಶವು ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ರೀಟ್ ಅಪೀಲು ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಷರತ್ತುಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಾಚೆಗಿನ ಉದಯೋನ್ಮುಖ ಟೆಕ್ ಕ್ಲಸ್ಟರ್ ಗಳಿಗೆ ಆದ್ಯತೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News