ಧಾರವಾಡ : ಮಾ.11 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಐಐಟಿ ಕಟ್ಟಡ ಹಾಗೂ ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸುವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಇಂದು ಮುಮ್ಮಿಗಟ್ಟಿಯ ಐಐಟಿಯ ನೂತನ ಕಟ್ಟಡದ ನಿರ್ಮಾಣ ಹಂತದ ಕಾಮಗಾರಿಯನ್ನು ವೀಕ್ಷಿಸಿ, ಪರಿಶೀಲಿಸಿದ ಅವರು ಮಾತನಾಡುತ್ತಾ, ಶೀಘ್ರವೇ ಉಳಿದೆಲ್ಲ ಕೆಲಸವನ್ನು ಬೇಗನೆ ಮುಕ್ತಾಯಗೊಳಿಸುವಂತೆ ಐಐಟಿಯ ಕಟ್ಟಡ ನಿರ್ಮಾಣದ ಕಂಪನಿಯ ಸಿಇಓಗೆ ತಿಳಿಸಲಾಗಿದೆ ಎಂದರು.


ಇದನ್ನೂ ಓದಿ: ಬೆಂಗಳೂರಿನ 28 ಕ್ಷೇತ್ರಗಳಲ್ಲಿ 20 ಕ್ಷೇತ್ರ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್‌


ಕಾರ್ಯಕ್ರಮಕ್ಕೆ 1 ಲಕ್ಷ ಜನ ಸೇರಲಿದ್ದಾರೆ.


ಕಾರ್ಯಕ್ರಮದಲ್ಲಿ ಶಾಸಕರಾದ ಅಮೃತ ದೇಸಾಯಿ, ಚಂದ್ರಕಾಂತ ಬೆಲ್ಲದ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ತವನಪ್ಪ ಅಷ್ಟಗಿ, ಮಹಾಪೌರ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಐಐಟಿಯ ನೂತನ ನಿರ್ದೇಶಕರಾದ ಪ್ರೊ: ವೆಂಕಪಯ್ಯ ದೇಸಾಯಿ, ರಜಿಸ್ಟ್ರಾರ್ ಪ್ರೊ. ಬಸವರಾಜಪ್ಪ, ಪ್ರೊ: ಸನತ್ ಕುಮಾರ್ ರಾಜಮಾನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.