ಧಾರವಾಡ: ಧಾರವಾಡ ಐಐಟಿ ನೂತನ ಕಟ್ಟಡವನ್ನು ಬರುವ ಜನವರಿ 1,2023 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ಅಗತ್ಯ ಸಿದ್ದತೆ ಮಾಡಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮಾಲೂರಿನಲ್ಲಿ ಮೋದಿ ನಿವಾಸದ ಅದ್ಧೂರಿ ಗೃಹ ಪ್ರವೇಶ


ಅವರು ಇಂದು ಮಧ್ಯಾಹ್ನ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿರುವ ಧಾರವಾಡ ಐಐಟಿ ನೂತನ ಕಟ್ಟಡದ ಕಾಮಗಾರಿ ಪರಿಶೀಲನೆ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.


ಪ್ರಧಾನಮಂತ್ರಿಗಳನ್ನು ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆಗೆ ಆಹ್ವಾನಿಸುವ ಕುರಿತು ಈಗಾಗಲೇ ಚರ್ಚಿಸಲಾಗಿದೆ. ಪ್ರಧಾನಿಗಳು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ವಾರ ಇನ್ನೊಮ್ಮೆ ಕಟ್ಟಡ ಕಾಮಗಾರಿ ನೋಡಿಕೊಂಡು ಉದ್ಘಾಟನೆ ದಿನಾಂಕ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.


ಇದನ್ನೂ ಓದಿ: ಕವನದ ಮೂಲಕ ಮಾದಪ್ಪನ ಬೆಟ್ಟದ ಜನರ ಕಷ್ಟ ಹೇಳಿದ ಕವಿ- ಗಮನ‌ ಹರಿಸ್ತಾರ ಸಿಎಂ!? 


ಜನವರಿ ತಿಂಗಳಲ್ಲಿ ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡಮೂರು ಬಾರಿ ವಿವಿಧ ಕಾರ್ಯಕ್ರಮಗಳಿಗಾಗಿ ಆಗಮಿಸಲಿದ್ದಾರೆ. ಆದರೂ ಜನವರಿ 1 ರಂದು ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಆಯೋಜಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.


ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ಜಿಕ್ಲಾಧಿಕಾರಿ ಗುರುದತ್ತ ಹೆಗಡೆ, ಧಾರವಾಡ ಐಐಟಿ ನೂತನ ನಿರ್ದೇಶಕ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ತಹಸಿಲ್ದಾರ ಸಂತೋಷ ಹಿರೇಮಠ,ಧಾರವಾಡ ಐಐಟಿ ಪ್ರಾಧ್ಯಾಪಕರು, ಕಟ್ಟಡ ಗುತ್ತಿಗೆದಾರರು ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.