ಕರ್ನಾಟಕ ರತ್ನ ಡಾ.ಪುನೀತ ರಾಜ್ಕುಮಾರ್ ಹೃದಯ ಜೋತಿ ಯೋಜನೆಯ ಉದ್ಘಾಟನೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 15, 2024 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡದ ಸತ್ತೂರಿನ ಡಾ.ಡಿ. ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರ ಭವನದಲ್ಲಿ ಆಯೋಜಿಸಲಾಗಿದೆ.
ಧಾರವಾಡ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 15, 2024 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡದ ಸತ್ತೂರಿನ ಡಾ.ಡಿ. ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರ ಭವನದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: Lokasabha Election 2024 : ಹ್ಯಾಟ್ರಿಕ್ ವೀರ ರಮೇಶ್ ಜಿಣಜಿಣಗಿಗೆ ಮತ್ತೊಮ್ಮೆ ಒಲಿದಿತೆ ಗೆಲುವು?
ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ನಿಗಮದ ಅಧ್ಯಕ್ಷರಾದ ಜೆ.ಎಂ.ಗಣೇಶ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ವೀಣಾ ಚೇತನ ಭರದ್ವಾಡ ಹಾಗೂ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಾಕೀರ ಸನದಿ ಅವರು ಭಾಗವಹಿಸುವರು.
ಇದನ್ನೂ ಓದಿ: Lokasabha Election 2024: ಕರಾವಳಿಯಲ್ಲಿ ಬಿಜೆಪಿಯ ಭದ್ರಕೋಟೆ ಭೇದಿಸುತ್ತಾ ಕೈ ಪಡೆ?
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದೀಪ.ಡಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅನಿಲ ಕುಮಾರ .ಟಿ.ಕೆ., ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಡಾ. ನವೀನ ಭಟ್.ವೈ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಹುಬ್ಬಳ್ಳಿ-ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿ ಡಾ.ಬಿ.ಎಸ್. ಪುಷ್ಪಲತಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಎಂ ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಆರ್.ಸಿ.ಎಚ್. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕ ಡಾ. ಶ್ರೀನಿವಾಸ.ಜಿ ಎನ್., ಎಸ್.ಡಿ.ಎಂ.ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ ಕುಮಾರ ಅವರು ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.