ಯುವಬರಹಗಾರರ ಚೊಚ್ಚಲ ಕೃತಿ ಪ್ರಕಟಣೆಗೆ ಪ್ರೋತ್ಸಾಹಧನ ಅರ್ಜಿ ಆಹ್ವಾನ

 ಕನ್ನಡ ಪುಸ್ತಕ ಪ್ರಾಧಿಕಾರವು 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000/-ಗಳ ಪ್ರೋತ್ಸಾಹಧನ ನೀಡಲಾಗುವುದು.

Last Updated : Jan 20, 2022, 02:10 AM IST
  • ಕನ್ನಡ ಪುಸ್ತಕ ಪ್ರಾಧಿಕಾರವು 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
  • ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000/-ಗಳ ಪ್ರೋತ್ಸಾಹಧನ ನೀಡಲಾಗುವುದು.
ಯುವಬರಹಗಾರರ ಚೊಚ್ಚಲ ಕೃತಿ ಪ್ರಕಟಣೆಗೆ ಪ್ರೋತ್ಸಾಹಧನ ಅರ್ಜಿ ಆಹ್ವಾನ title=

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000/-ಗಳ ಪ್ರೋತ್ಸಾಹಧನ ನೀಡಲಾಗುವುದು.

ಇದನ್ನೂ ಓದಿ: ಸಾನಿಯಾ ಮಿರ್ಜಾ ಅಭಿಮಾನಿಗಳಿಗೆ ಶಾಕ್! ನಿವೃತ್ತಿಯ ನಿರ್ಧಾರ ಪ್ರಕಟಿಸಿದ ಟೆನಿಸ್ ತಾರೆ

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ, ಸ್ನಾತಕೊತ್ತರ ಪದವಿ (ಪಿಹೆಚ್‍ಡಿ)ಗೆ ಸಿದ್ದಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು.ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ, ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು, ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಬೇಕು.

ಅರ್ಜಿಗಳನ್ನು ಸಲ್ಲಿಸಲು ಫೆ. 15 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಕಳುಹಿಸಿಕೊಡಬೇಕು.

ಹೆಚ್ಚಿನ ಮಾಹಿತಿಗಾಗಿ  ವೆಬ್‍ಸೈಟ್ www.kannadapustakapradhikara.com ದೂರವಾಣಿ ಸಂಖ್ಯೆ: 080-2248516/22107704 ಇಲ್ಲಿ ಸಂಪರ್ಕಿಸಬಹುದೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News