ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್ಸಿ & ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Bangalore Corona Cases Update: ಬೆಂಗಳೂರಿನಲ್ಲಿ ಕೊರೊನಾ ಮಹಾಸ್ಪೋಟ


2021-22ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ, ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ/ ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿAಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಬೇಕಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 30 ರವರೆಗೆ ಅವಕಾಶವಿದೆ.  


ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್  www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್  www.tw.kar.nic.in     ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್ ಯಾವುದೇ ಅರ್ಜಿಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.