ಬೆಂಗಳೂರು: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: 4 ಪ್ರಮುಖರಿಗೆ ಟೀಂ ಇಂಡಿಯಾದ ಬಾಗಿಲು ಬಂದ್! ಯುವ ಆಟಗಾರರ ಎಂಟ್ರಿಯಿಂದ ಅಂತ್ಯವಾಯ್ತು ವೃತ್ತಿಬದುಕು!
ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ. ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ. ಇಂಥಾ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬೇಡಿ, ಅನ್ನದಾತರು ದುಡಿದರೆ ದೇಶ ಬದುಕುತ್ತದೆ ಎಂದರು.
ನಾವು ತಲಾ 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿ ಪ್ರತಿ ಕೆಜಿಗೆ 34 ರೂಪಾಯಿ ಕೊಡ್ತೀವಿ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಆದರೂ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ ಅಕ್ಕಿ ಕೊಡಲಿಲ್ಲ. ಬಿಜೆಪಿ ಬಡವರ, ದುಡಿಯುವವರ, ಶ್ರಮಿಕರ ಪರವಾಗಿ ಇದ್ದಿದ್ದರೆ, ಈ ನಾಡಿನ ದಲಿತರು, ಶೂದ್ರರು ಮತ್ತು ಹಿಂದುಳಿದವರ ಪರವಾಗಿ ಇದ್ದಿದ್ದರೆ ಅಕ್ಕಿ ಕೊಡುತ್ತಿತ್ತು. ಮೋದಿಗೆ, ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಹಸಿವು ಮುಕ್ತ ದೇಶ ಬೇಕಾಗಿಲ್ಲ. ಆದ್ದರಿಂದ ನಿಜವಾಗಿ ನಿಮ್ಮ ಪರವಾಗಿ ಇರುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಿ. ನಿಮ್ಮ ಹೃದಯದ ಮಾತು ಕೇಳಿ ಮತ ಚಲಾಯಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.
ಹಸಿವಿನ ಜೊತೆಗೆ ದೇಶವನ್ನು ಅನಕ್ಷರತೆ, ಅನಾರೋಗ್ಯ ಮತ್ತು ನಿರುದ್ಯೋಗ ಮುಕ್ತ ಮಾಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ. ನಮ್ಮ ಹಿಂದಿನ ಸರ್ಕಾರದ ಕಾಲದಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್ ಕಾರ್ಯಕ್ರಮಗಳೆಲ್ಲವೂ ಈ ಗುರಿಯೆಡೆಗೆ ಕರ್ನಾಟಕವನ್ನು ಕೊಂಡೊಯ್ಯುವ ಪ್ರಯತ್ನದಲ್ಲಿ ಯಶಸ್ವಿ ಆಗಿದ್ದೇವೆ. ನಮ್ಮ ಈಗಿನ ಸರ್ಕಾರದ ಗ್ಯಾರಂಟಿ ಯೋಜನೆಗಳ ಗುರಿ ಕೂಡಾ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ ಎಂದರು.
ಬಸವಣ್ಣನ ಕಾಯಕ-ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆ
ನಮ್ಮ ಯೋಜನೆಗಳಲ್ಲಿ ರಾಜಕೀಯ ಲಾಭದ ಉದ್ದೇಶ ಇಲ್ಲ, ನಮ್ಮ ಯೋಜನೆಗಳ ಉದ್ದೇಶ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆ. ರಾಜ್ಯದ ಯಾವುದೇ ಮನೆಯಲ್ಲಿ ಹಸಿವು, ಅನಾರೋಗ್ಯ, ಅನಕ್ಷರತೆ ಮತ್ತು ನಿರುದ್ಯೋಗದಿಂದ ಬಳಲುವವರು ಇರದಂತೆ ನೋಡಿಕೊಳ್ಳುವುದೇ ನಮ್ಮ ಆಶಯ ಮತ್ತು ಬದ್ದತೆ ಎಂದರು.
ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರು ಘಳಿಗೆಯಲ್ಲಿಯೇ ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದೆ. 2013ರ ಬಸವ ಜಯಂತಿಯ ದಿನವೇ ಜಾರಿಗೆ ಬಂದಿರುವ ಅನ್ನಭಾಗ್ಯ ಯೋಜನೆ ಬಸವಣ್ಣನವರ ದಾಸೋಹದಿಂದ ಪ್ರೇರಿತವಾಗಿರುವುದು ಎಂದು ನೆನಪಿಸಿದರು.
ಇದನ್ನೂ ಓದಿ: ತನ್ನ 18 ವರ್ಷಗಳ ಸುದೀರ್ಘ ವೃತ್ತಿಜೀವನಕ್ಕೆ ವಿದಾಯ ಹೇಳಿದ ಅನುಭವಿ
ಕಮಿಷನ್ ಮೊತ್ತ ಹೆಚ್ಚಳ
ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳಗೊಳಿಸಿ ಮುಖ್ಯಮಂತ್ರಿ ಮಹತ್ವದ ಘೋಷಣೆ ಮಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.