ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ 

Written by - Prashobh Devanahalli | Edited by - Krishna N K | Last Updated : Jan 6, 2024, 04:24 PM IST
  • ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ ಗೌರವಧನ
  • ಗೌರವಧನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ
ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ title=

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. 

ಅವರು ಇಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ:ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ಇದನ್ನೂ ಓದಿ:ಯುವ ನಿಧಿ ಯೋಜನೆಯಡಿ ಹೆಚ್ಚು ನೊಂದಣಿ ಮಾಡಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗಯವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮನವಿ ಮಾಡಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News