ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಇದನ್ನೂ ಓದಿ : ₹ 19 ಕೋಟಿ ವಂಚಿಸಿದ ಚೀನಾದ ಸ್ಮಾರ್ಟ್‌ಫೋನ್ ಕಂಪನಿ ಅಧಿಕಾರಿ ಬಂಧನ
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.ಈ ಕಾಯ್ದೆಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಯವರಿಗೆ ಮೀಸಲಾತಿ ಪ್ರಮಾಣ ಶೇ. 15 ರಿಂದ ಶೇ. 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ.
ಇದನ್ನೂ ಓದಿ : 72 ಲಕ್ಷ ರೂ ಕದ್ದ ಆರೋಪದ ಮೇಲೆ ಸೋನು ನಿಗಮ್ ತಂದೆಯ ಮಾಜಿ ಚಾಲಕನ ವಿರುದ್ಧ ಪ್ರಕರಣ
ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆಯನ್ನು ಸಂವಿಧಾನದ 9ನೆ ಶೆಡ್ಯೂಲ್ ಗೆ ಸೇರಿಸುವ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನ ವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.