ಬೆಂಗಳೂರು : ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  


COMMERCIAL BREAK
SCROLL TO CONTINUE READING

ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 


ಇದನ್ನೂ ಓದಿ : ಉಪಚುನಾವಣೆಯಲ್ಲಿ ಸೋಲು ಗೆಲುವು ದೇವರ ಫಲಾಫಲ : ಡಿಸಿಎಂ


ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ARS ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ. ಆಸ್ಪತ್ರೆಯ ARS fund ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ ಎಂದರು. 


ಜನರಿಗೆ ಹೊರೆಯಾಗದಂತೆ ಶುಲ್ಕ ಪರಿಷ್ಕರಣೆಗೆ ಚಿಂತನೆ: 
ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಶೇ 15 ರಿಂದ 20 ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ. ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ.ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.