ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಏರಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರ ಆದಷ್ಟು ಬೇಗ ನಿರ್ಣಯ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ಮೇಲೆ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜನತಾ ಮಿತ್ರ ಸಮಾರೋಪ ಸಮಾವೇಶದ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು. ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಸರ್ವಪಕ್ಷದ ನಾಯಕರು ಈ ಬಗ್ಗೆ ಚರ್ಚಿಸಿದ್ದು, ಜನಗಣತಿ ಆಧಾರದ ಮೇಲೆ ಎಸ್ ಸಿ ಸಮಾಜಕ್ಕೆ ಶೇ. 15 ರಿಂದ ಶೇ.17 ಕ್ಕೆ ಹಾಗೂ ಎಸ್ ಟಿಗೆ ಶೇ.3 ರಿಂದ ಶೇ.7 ಕ್ಕೆ ಮೀಸಲಾತಿ ಏರಿಕೆ ಮಾಡಲು ಆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದಷ್ಟು ಬೇಗನೆ, ಸಮಯ ವ್ಯರ್ಥ ಮಾಡದೆ ಮೀಸಲಾತಿಯನ್ನು ಹೆಚ್ಚಿಸಿ ಜಾರಿಗೆ ತರಬೇಕು ಎಂದು ನಾನು ಸಲಹೆ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಎಸ್‌ಸಿ, ಎಸ್‌ಟಿಯವರಿಗೆ ಸಿಹಿ ಸುದ್ದಿ : ಮೀಸಲಾತಿ ಹೆಚ್ಚಿಸಿದ ಬೊಮ್ಮಾಯಿ ಸರ್ಕಾರ
ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಸದನದಲ್ಲಿ ಹೇಳಿದ್ದರು. ಹಾಗಾಗಿ, ಸಭೆ ಕರೆಯಲಾಗಿತ್ತು. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದ್ದೆವು. ಆ ವರದಿಗೆ ನನ್ನ ನೇತೃತ್ವದ ಸರಕಾರ ಒಪ್ಪಿಗೆಯನ್ನು ನೀಡಿತ್ತು. ಈ ವರದಿ ಅನುಷ್ಠಾನಕ್ಕೆ ತರಬೇಕೆಂದು ನಾಯಕ ಸಮುದಾಯದ ಪೂಜ್ಯ ಶ್ರೀಗಳು ಸುಧೀರ್ಘ ಕಾಲದಿಂದ ಧರಣಿ ಮಾಡಿದ್ದಾರೆ. ಇದರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ವ ಪಕ್ಷದ ಸಭೆ ಕರೆದಿದ್ದು, ಸರ್ವ ಪಕ್ಷಗಳೂ ಈ ಬಗ್ಗೆ ಸರಕಾರಕ್ಕೆ ಸಲಹೆ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಇದರ ಪ್ರಮುಖ ವಿಷಯ ಇದ್ದರೂ, ದೇಶದ ಹಲವಾರು ರಾಜ್ಯದಲ್ಲಿ ಇರುವ ಹಲವಾರು ಸಣ್ಣ ಪುಟ್ಟ ಸಮಾಜದರು ಇದ್ದಾರೆ. 75 ವರ್ಷದಲ್ಲಿ ಎಂದೂ ಮೀಸಲಾತಿ ಕಾಣದೆ ಇರುವ ಆನೇಕ ಸಮುದಾಯಗಳು ಇವೆ. ಅದರ ಜತೆಗೆ ಒಳ ಮೀಸಲಾತಿ ಬಗ್ಗೆಯೂ ಚರ್ಚೆ ಮಾಡಿದ್ದೇವೆ. 2005 ರಲ್ಲಿ ಒಳ ಮೀಸಲಾತಿ ವಿಚಾರವಾಗಿ ಕಮಿಟಿ ರಚನೆ ಮಾಡಿತ್ತು. ಆಗಿನ ಸರ್ಕಾರ ಆ ವರದಿ ಕೊಟ್ಟು ಹತ್ತು ವರ್ಷಗಳಾಗಿವೆ. ಇನ್ನೂ ಅದರ ಕಾರ್ಯಗತವಾಗಿಲ್ಲ. ಆದರೆ, ಅದಕ್ಕೆ ಕೋಟ್ಯಾಂತರ ರೂ. ಹಣ ಖರ್ಚಾಗಿದೆ. ಇದರ ಬಗ್ಗೆಯೂ ಕ್ರಮ ತೆಗೆದುಕೊಳ್ಳುವಂತೆ ಸಭೆಯಲ್ಲಿ ಹೇಳಿದ್ದೇವೆ ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.