ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು :ಇಂದಿನಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ

ಜುಲೈ 18ರ ವೇಳೆಗೆ ಜಲಾಶಯದಲ್ಲಿ 46.802  ಟಿಎಂಸಿ ನೀರು ಸಂಗ್ರಹ ಇದ್ದು, ಒಳ ಹರಿವಿನ 104060  ಕ್ಯೂಸೆಕ್ಸ್ ಇದೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ. 

Written by - Ranjitha R K | Last Updated : Jul 18, 2024, 02:07 PM IST
  • ಹೆಚ್ಚಿದ ತುಂಗ ಭದ್ರಾ ಒಳಹರಿವು
  • ನಾಲೆಗಳಿಗೆ ನೀರು ಹರಿಸುವಂತೆ ಸೂಚನೆ
  • ವಾರದಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ.
 ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು :ಇಂದಿನಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ title=

ಬೆಂಗಳೂರು : ಉತ್ತಮ ಮಳೆಯಿಂದಾಗಿ ತುಂಗಾಭದ್ರಾ ಜಲಾಶಯಕ್ಕೆ ಹೆಚ್ಚಿನ‌ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು- ಹಂಗಾಮಿನ ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಜಲಾನಯನ ಪ್ರದೇಶದಲ್ಲಿ‌ ಸಾಕಷ್ಟು ಒಳ ಹರಿವು ಪ್ರಾರಂಭವಾಗಿದೆ.ಜುಲೈ 18ರ ವೇಳೆಗೆ ಜಲಾಶಯದಲ್ಲಿ 46.802  ಟಿಎಂಸಿ ನೀರು ಸಂಗ್ರಹ ಇದ್ದು, ಒಳ ಹರಿವಿನ 104060  ಕ್ಯೂಸೆಕ್ಸ್ ಇದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಅಪ್ಪುಗೆ ಏಕಾದಶಿ ಎಡೆ ಇಟ್ಟು ಪೂಜೆ ಸಲ್ಲಿಸಿದ ಅಭಿಮಾನಿ

ಇದೇ ಪ್ರಮಾಣದಲ್ಲಿ ಒಳ ಹರಿವು ಮುಂದುವರೆದಲ್ಲಿ ವಾರದಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ.ಸದ್ಯಕ್ಕೆ ಒಳ ಹರಿವು ಉತ್ತಮವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸದೇ ನಾಲೆಗಳಿಗೆ ನೀರು  ಹರಿಸಲು ಸೂಚಿಸಲಾಗಿದೆ.  ಶೀಘ್ರದಲ್ಲೇ ಐಸಿಸಿ ಸಭೆಗೆ ದಿನಾಂಕ ನಿಗದಿಪಡಿಸಲಾಗುವುದು. ರೈತರ ಹಿತ ದೃಷ್ಟಿಯಿಂದ ಮುಂಗಡವಾಗಿ ನೀರು ಬಿಡುಗಡೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 

ಎಡದಂಡೆ ಮುಖ್ಯ ಕಾಲುವೆಗೆ ಜುಲೈ 19ರಿಂದ 4100 ಕ್ಯೂಸೆಕ್ಸ್ ನಂತೆ, ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆಗೆ ಜು.19ರಿಂದ‌ 650 ಕ್ಯೂಸೆಕ್ಸ್ ನಂತೆ,ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆಗೆ ಜು.19ರಿಂದ 1300 ಕ್ಯೂಸೆಕ್ ನಂತೆ ಹಾಗೂ ಕಾರ್ಖಾನೆಗಳಿಗೆ 60 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು.ಇನ್ನು ರಾಯಬಸವಣ್ಣ ಕಾಲುವೆಗೆ ಈಗಾಗಲೇ ಜೂ.1ರಿಂದ 180 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುತ್ತಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :   ಹಾಸನದಲ್ಲಿ ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News