ಕರ್ನಾಟಕ ಕಾನೂನು ವಿವಿ ವಿರುದ್ಧ ಪಟ್ಟು ಸಡಿಲಿಸದ ವಿದ್ಯಾರ್ಥಿಗಳು, ಮುಂದುವರೆದ ಅಹೋರಾತ್ರಿ ಧರಣಿ ಸತ್ಯಾಗ್ರಹ
ಆಫ್ಲೈನ್ ಮಾದರಿಯಲ್ಲಿ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಹುಬ್ಬಳ್ಳಿ: ಆಫ್ಲೈನ್ ಮಾದರಿಯಲ್ಲಿ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್
ಕರ್ನಾಟಕ ಕಾನೂನು ವಿವಿಯ ಚೆಲ್ಲಾಟ, ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ..!
ಈಗಾಗಲೇ ವಿದ್ಯಾರ್ಥಿಗಳು ಹೈಕೋರ್ಟ್ ನಲ್ಲಿಯೂ ಕೂಡ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ನಡೆಯನ್ನು ಪ್ರಶ್ನಿಸಿದ್ದಾರೆ. ಕಳೆದ ನವೆಂಬರ್ 15 ರಂದು ನಡೆಯಬೇಕಾಗಿದ್ದ ವಿವಿ ಪರೀಕ್ಷೆಯ ವೇಳಾಪಟ್ಟಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಹೈಕೋರ್ಟ್ ಗೆ ಮೊರೆ ಹೋಗಿ ಅದಕ್ಕೆ ತಡೆ ತಂದಿದ್ದರು, ಆಗ ಹೈಕೋರ್ಟ್ನ ಏಕಸದಸ್ಯ ಪೀಠವು ಡಿಸೆಂಬರ್ 20 ರವರೆಗೆ ಯಾವುದೇ ರೀತಿಯ ಪರೀಕ್ಷೆಯನ್ನು ನಡೆಸುವಂತಿಲ್ಲ ಎಂದು ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು.
ಆದರೆ ಈ ತಡೆಯಾಜ್ಞೆಯನ್ನು ತೆರವುಗೊಳಿಸಲು ಕರ್ನಾಟಕ ಕಾನೂನು ವಿವಿ ಮತ್ತೆ ಹೈಕೋರ್ಟ್ ಗೆ ಮನವಿ ಮಾಡಿತ್ತು, ಇದರಿಂದಾಗಿ ಮುಖ್ಯನ್ಯಾಯಮೂರ್ತಿಗಳ ಪೀಠವು ಕಾನೂನು ವಿವಿಯು ಪರೀಕ್ಷೆಯನ್ನು ನಡೆಸಲು ಯಾವುದೇ ಅಭ್ಯಂತರವಿಲ್ಲ, ಆದರೆ ಅಂತಿಮ ಫಲಿತಾಂಶ ಮಾತ್ರ ವಿದ್ಯಾರ್ಥಿಗಳ ಬಡ್ತಿ ವಿಚಾರಣೆಗೆ ಸಂಬಂಧಿಸಿದ ಪ್ರಕರಣ ಮುಗಿದ ನಂತರವಷ್ಟೇ ಪ್ರಕಟಿಸಬೇಕು ಎಂದು ಹೇಳಿತ್ತು, ಇನ್ನೊಂದೆಡೆಗೆ ಬಾರ್ ಕೌನ್ಸಿಲ್ ಕೂಡ ಪರೀಕ್ಷೆಯನ್ನು ನಡೆಸದೆ ಕಾನೂನು ವಿವಿ ಪದವಿಯನ್ನು ಪರಿಗಣಿಸುವುದಿಲ್ಲ ಎಂದು ವಿಚಾರಣೆ ವೇಳೆ ಹೇಳಿತ್ತು. ಈಗ ಪ್ರಕರಣ ಸುದೀರ್ಘ ವಿಚಾರಣೆ ಮತ್ತೆ ಮಾರ್ಚ್ ತಿಂಗಳಲ್ಲಿ ಬರಲಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದ ಕರ್ನಾಟಕ ಕಾನೂನು ವಿವಿಯ ಅಧಿಸೂಚನೆಗಳು..!
ಈಗ ಬಾರ್ ಕೌನ್ಸಿಲ್ ಹಾಗೂ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ಧ್ವಂದ್ವ ಧೋರಣೆಯನ್ನು ಅನುಸರಿಸುತ್ತಿವೆ, ಈಗಾಗಲೇ ದೇಶದ ಹಲವಾರು ವಿವಿಗಳು ಆಫ್ ಲೈನ್ ಪರೀಕ್ಷೆಯನ್ನು ನಡೆಸದೆ ಉಳಿದ ಮೂರು ಮಾದರಿಯ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಿ ಅವರನ್ನು ಮುಂದಿನ ತರಗತಿಗಳಿ ಬಡ್ತಿ ಮಾಡಿವೆ. ಆದರೆ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ಮಾತ್ರ ವಿದ್ಯಾರ್ಥಿಗಳ ಹಿತರಕ್ಷಣೆ ಕಾಯುವ ಬದಲು ದ್ವೇಷ ಸಾಧಿಸುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ