CM Siddaramaiah statement: ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು. ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ. ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಬೀತು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.
ಇದನ್ನೂ ಓದಿ: ನಟಿ ರೇಖಾ ಸಮಸ್ತ ಸಂಪತ್ತಿಗೆ ವಾರಸುದಾರ, 400 ಕೋಟಿ ಆಸ್ತಿಯ ಉತ್ತರಾಧಿಕಾರಿ ಇವರೇ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಮತ್ತು ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ. ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತ್ವವನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತುಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತ್ವವನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದರು.
ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಇದನ್ನೂ ಓದಿ: ಕ್ರೆಡಿಟ್ ಕಾರ್ಡ್‌ಗಳನ್ನು Google Pay ಗೆ ಲಿಂಕ್ ಮಾಡುವ ಸುಲಭ ವಿಧಾನ ಇಲ್ಲಿದೆ
ಭಾರತ ಬುದ್ದ, ಬಸವ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ದ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ದವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತಿರುಚಿ ತೋರಿಸುತ್ತಿದ್ದಾರೆ. ಇದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









