ಭಾರತ ಹಿಂದೂ ರಾಷ್ಟ್ರವಲ್ಲ, ಹಿಂದೆಯೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಸ್ವಾಮಿ ಪ್ರಸಾದ್ ಮೌರ್ಯ

Swami Prasad Maurya: ಭಾರತದಲ್ಲಿರುವ ಎಲ್ಲರೂ ಭಾರತೀಯರು. ನಮ್ಮ ದೇಶದ ಸಂವಿಧಾನವು ಎಲ್ಲಾ ಜಾತಿ, ಧರ್ಮ, ಪಂಗಡ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ’ ಎಂದು ಸ್ವಾಮಿ ಪ್ರಸಾದ್ ಮೌರ್ಯ ಟ್ವೀಟ್ ಮಾಡಿದ್ದಾರೆ.

Written by - Puttaraj K Alur | Last Updated : Sep 3, 2023, 01:49 PM IST
  • ಭಾರತವು ಹಿಂದೂ ರಾಷ್ಟ್ರವಲ್ಲ, ಹಿಂದೆಂದೂ ಹಿಂದೂ ರಾಷ್ಟ್ರವಾಗಿರಲಿಲ್ಲ
  • RSS​ ಮುಖ್ಯಸ್ಥ ಮೋಹನ್​ ಭಾಗವತ್ ಹೇಳಿಕೆಗೆ ಸ್ವಾಮಿ ಪ್ರಸಾದ್​ ಮೌರ್ಯ ತಿರುಗೇಟು
  • ಎಲ್ಲಾ ಭಾರತೀಯರು ಹಿಂದೂಗಳನ್ನು ಪ್ರತಿನಿಧಿಸುತ್ತಾರೆ ಎಂದಿದ್ದ ಮೋಹನ್ ಭಾಗವತ್
ಭಾರತ ಹಿಂದೂ ರಾಷ್ಟ್ರವಲ್ಲ, ಹಿಂದೆಯೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಸ್ವಾಮಿ ಪ್ರಸಾದ್ ಮೌರ್ಯ title=

ನವದೆಹಲಿ: ಭಾರತವು ಹಿಂದೂ ರಾಷ್ಟ್ರವಲ್ಲ, ಹಿಂದೆಂದೂ ಹಿಂದೂ ರಾಷ್ಟ್ರವಾಗಿರಲಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಮಾಜಿ ಸಚಿವ ಸ್ವಾಮಿ ಪ್ರಸಾದ್​ ಮೌರ್ಯ ಹೇಳಿದ್ದಾರೆ.

ಇತ್ತೀಚಿಗಷ್ಟೇ RSS​ ಮುಖ್ಯಸ್ಥ ಮೋಹನ್​ ಭಾಗವತ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿ,​ ‘ಭಾರತ ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಭಾರತೀಯರು ಹಿಂದೂಗಳನ್ನು ಪ್ರತಿನಿಧಿಸುತ್ತಾರೆ’ ಅಂತಾ ಹೇಳಿದ್ದರು. ಈ ಹೇಳಿಕೆಗೆ ಟ್ವೀಟ್ ಮೂಲಕ ಸ್ವಾಮಿ ಪ್ರಸಾದ್​ ಮೌರ್ಯ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Balasore train accident: ಮೂವರು ರೈಲ್ವೆ ಅಧಿಕಾರಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ

‘ಭಾರತವು ಹಿಂದೂ ರಾಷ್ಟ್ರವಲ್ಲ, ಹಿಂದೆಂದೂ ಹಿಂದೂ ರಾಷ್ಟ್ರವಾಗಿರಲಿಲ್ಲ. ಭಾರತವು ಸ್ವತಃ ಸಾರ್ವಭೌಮ ರಾಷ್ಟ್ರವಾಗಿದೆ. ನಮ್ಮ ಸಂವಿಧಾನವು ಜಾತ್ಯಾತೀತ ರಾಷ್ಟ್ರದ ಪರಿಕಲ್ಪನೆಯನ್ನು ಹೊಂದಿದೆ. ಭಾರತದಲ್ಲಿರುವ ಎಲ್ಲರೂ ಭಾರತೀಯರು. ನಮ್ಮ ದೇಶದ ಸಂವಿಧಾನವು ಎಲ್ಲಾ ಜಾತಿ, ಧರ್ಮ, ಪಂಗಡ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ’ ಎಂದು ಸ್ವಾಮಿ ಪ್ರಸಾದ್ ಮೌರ್ಯ ಟ್ವೀಟ್ ಮಾಡಿದ್ದಾರೆ.

2017-22ರವರೆಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿಪ್ರಸಾದ್​ ಮೌರ್ಯ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಬಳಿಕ ಎಸ್​ಪಿಯಿಂದ ಸ್ಪರ್ಧಿಸಿದ್ದ ಅವರು ಹೀನಾಯ ಸೋಲು ಕಂಡಿದ್ದರು.  

ಇದನ್ನೂ ಓದಿ: ರೈತನ ಮಗಳ ಕೈಯಲ್ಲಿ ‘Aditya L1’ ಕಮಾಂಡ್: ಈಕೆ ಯಾರು? ತಿಂಗಳಿಗೆ ಪಡೆಯುವ ಸಂಬಳ ಎಷ್ಟು ಗೊತ್ತಾ?

ಭಾರತ ಹಿಂದೂ ರಾಷ್ಟ್ರ ಎನ್ನುವ ವಿಚಾರ ಸತ್ಯ. ಸೈದ್ಧಾಂತಿಕವಾಗಿ ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳೆಂದರೆ ಎಲ್ಲಾ ಭಾರತೀಯರು. ಇಂದು ಭಾರತದಲ್ಲಿರುವವರು ಹಿಂದೂ ಭೂಮಿ ಮತ್ತು ಸಂಸ್ಕೃತಿಗೆ ಸಂಬಂಧಿಸಿದವರು. ಇವುಗಳನ್ನೂ ಹೊರತುಪಡಿಸಿ ಬೇರೇನು ಇಲ್ಲವೆಂದು RSS ​ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News