ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ..! ಹೆಚ್ಚುವರಿ ದಟ್ಟಣೆ ಕಡಿಕೆ ಮಾಡಲು ವಿಶೇಷ ರೈಲುಗಳ ಸೇವೆ ವಿಸ್ತರಣೆ

ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ನೈರುತ್ಯ ರೈಲ್ವೆ ವಲಯವು ಈ ಕೆಳಗಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಸುದ್ದಿ ಓದಿ  

Written by - Manjunath Hosahalli | Edited by - Krishna N K | Last Updated : Jul 4, 2023, 05:44 PM IST
  • ರಾಜ್ಯ ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ.
  • ದಟ್ಟಣೆ ತೆರವುಗೊಳಿಸುವ ಸಲುವಾಗಿ ವಿಶೇಷ ರೈಲುಗಳ ಸೇವೆ ವಿಸ್ತರಣೆ.
  • ನೈರುತ್ಯ ರೈಲ್ವೆ ವಲಯ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ..! ಹೆಚ್ಚುವರಿ ದಟ್ಟಣೆ ಕಡಿಕೆ ಮಾಡಲು ವಿಶೇಷ ರೈಲುಗಳ ಸೇವೆ ವಿಸ್ತರಣೆ title=

ಬೆಂಗಳೂರು : ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ಈ ಕೆಳಗಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದೆ. ಈ ರೈಲುಗಳ ಸಮಯ, ಬೋಗಿಗಳ ಸಂಯೋಜನೆ ಮತ್ತು ನಿಲುಗಡೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ರೈಲ್ವೇ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿ ಶನಿವಾರ ಕೆ.ಎಸ್‌.ಆರ್ ಬೆಂಗಳೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06547 ಕೆ.ಎಸ್‌.ಆರ್ ಬೆಂಗಳೂರು - ವೇಲಂಕಣಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ಮೊದಲು ಜುಲೈ 8 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲಿನ ಸೇವೆಯನ್ನು ಜುಲೈ 15 ರಿಂದ ಸೆಪ್ಟೆಂಬರ್ 30 ರವರೆಗೆ (12 ಟ್ರೀಪ್‌) ವಿಸ್ತರಿಸಲಾಗುತ್ತಿದೆ. 

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಜೆಪಿಯಿಂದ ಬೃಹತ್ ಧರಣಿಗೆ ಸಿದ್ಧತೆ

ಪ್ರತಿ ಶನಿವಾರ ವೇಲಂಕಣಿ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06548 ವೇಲಂಕಣಿ – ಕೆ.ಎಸ್‌.ಆರ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ಮೊದಲು ಜುಲೈ 8 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲಿನ ಸೇವೆಯನ್ನು ಜುಲೈ 15 ರಿಂದ ಸೆಪ್ಟೆಂಬರ್ 30 ರವರೆಗೆ (12 ಟ್ರೀಪ್‌) ವಿಸ್ತರಿಸಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News