ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ..! ಹೆಚ್ಚುವರಿ ದಟ್ಟಣೆ ಕಡಿಕೆ ಮಾಡಲು ವಿಶೇಷ ರೈಲುಗಳ ಸೇವೆ ವಿಸ್ತರಣೆ
ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ನೈರುತ್ಯ ರೈಲ್ವೆ ವಲಯವು ಈ ಕೆಳಗಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಸುದ್ದಿ ಓದಿ
ಬೆಂಗಳೂರು : ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ಈ ಕೆಳಗಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದೆ. ಈ ರೈಲುಗಳ ಸಮಯ, ಬೋಗಿಗಳ ಸಂಯೋಜನೆ ಮತ್ತು ನಿಲುಗಡೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ರೈಲ್ವೇ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರತಿ ಶನಿವಾರ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06547 ಕೆ.ಎಸ್.ಆರ್ ಬೆಂಗಳೂರು - ವೇಲಂಕಣಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ಮೊದಲು ಜುಲೈ 8 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲಿನ ಸೇವೆಯನ್ನು ಜುಲೈ 15 ರಿಂದ ಸೆಪ್ಟೆಂಬರ್ 30 ರವರೆಗೆ (12 ಟ್ರೀಪ್) ವಿಸ್ತರಿಸಲಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಜೆಪಿಯಿಂದ ಬೃಹತ್ ಧರಣಿಗೆ ಸಿದ್ಧತೆ
ಪ್ರತಿ ಶನಿವಾರ ವೇಲಂಕಣಿ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06548 ವೇಲಂಕಣಿ – ಕೆ.ಎಸ್.ಆರ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ಮೊದಲು ಜುಲೈ 8 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲಿನ ಸೇವೆಯನ್ನು ಜುಲೈ 15 ರಿಂದ ಸೆಪ್ಟೆಂಬರ್ 30 ರವರೆಗೆ (12 ಟ್ರೀಪ್) ವಿಸ್ತರಿಸಲಾಗುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.