ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್. ರಕ್ಷಾ ರಾಮಯ್ಯ ನೇಮಕ

ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ- ರಕ್ಷಾ ರಾಮಯ್ಯ

Written by - Zee Kannada News Desk | Last Updated : Jun 3, 2022, 11:51 AM IST
  • ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
  • ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ- ರಕ್ಷಾ ರಾಮಯ್ಯ
  • ರಾಷ್ಟ್ಟಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ- ರಕ್ಷಾ ರಾಮಯ್ಯ
ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್. ರಕ್ಷಾ ರಾಮಯ್ಯ ನೇಮಕ title=
Raksha Ramaiah

ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಭಾರತೀಯ ಯುವ ಕಾಂಗ್ರೆಸ್ ಗೆ ತಾವು ಸಲ್ಲಿಸಿದ ಸೇವಯನ್ನು ಪರಿಗಣಿಸಿ "ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಲು ಸಂತಸವಾಗುತ್ತಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ" ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.

ಇದನ್ನೂ ಓದಿ- Bus Fire : ಭೀಕರ ಬಸ್ ದುರಂತ : 8 ರಿಂದ 9 ಜನ ಸಜೀವ ದಹನ ಶಂಕೆ

ಪಕ್ಷ ಸಂಘಟನೆಗಾಗಿ ತಾವು ನಿಮ್ಮ ಪೂರ್ಣ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುತ್ತೀರಿ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ತಾವು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ- ಮಂಡ್ಯ ರೈತ ಮುಖಂಡನ ಒಂದೇ ಟ್ವಿಟ್‌ಗೆ ಪ್ರಧಾನಿ ಮೋದಿ ಸ್ಪಂದನೆ, ಕ್ಷಣದಲ್ಲಿ ಸಮಸ್ಯೆಗೆ ಪರಿಹಾರ

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಇತ್ತೀಚೆಗೆ ವಿಶೇಷವಾಗಿ ಉದಯಪುರದಲ್ಲಿ ಜರುಗಿದ ಕಾಂಗ್ರೆಸ್ ಚಿಂತನ ಸಮಾವೇಶದಲ್ಲಿ ಕೈಗೊಂಡ ನಿರ್ಣಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ರಾಷ್ಟ್ಟಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News