ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ

CM Siddaramaiah Slams PM Narendra Modi: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ರೂ. ಇತ್ತು. ಇದೀಗ ಮೋದಿ 177 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Jul 26, 2023, 07:33 PM IST
  • ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ
  • ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ರೂ. ಇತ್ತು
  • ಇದೀಗ ಪ್ರಧಾನಿ ಮೋದಿ ಕಳೆದ 9 ವರ್ಷದಲ್ಲಿ 177 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ
ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ title=
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಮಾತನಾಡಿದ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.   

ಇದನ್ನೂ ಓದಿ: ಕರ್ನಾಟಕದಲ್ಲಿ ಒಳ ಹರಿವು ಮಟ್ಟ ಹೆಚ್ಚಳ; ಡ್ಯಾಂ ನೀರಿನ ಪ್ರಮಾಣದ ಇಲ್ಲಿದೆ ಇಂದಿನ ವಿವರ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ  ಸಂಪೂರ್ಣ ಹದಗೆಟ್ಟಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ರೂ. ಇತ್ತು. ಇದೀಗ ಮೋದಿ 177 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಕೇವಲ 9 ವರ್ಷದಲ್ಲಿ ಇಷ್ಟೊಂದು ಸಾಲ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ’ ಅಂತಾ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಡುಪಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು

‘ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಹೆಚ್ಚಾಗಿದೆ. ಹೀಗಾಗಿ ಪೆಟ್ರೋಲ್ ಬೆಲೆ ಸಹ ಹೆಚ್ಚಾಗಿದೆ ಎಂದು ಜನಸಾಮಾನ್ಯರಿಗೆ ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ. ಅಂತಾರಾಷ್ಟ್ರೀಯ​​ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ದರ ಕಡಿಮೆಯಾಗಿದೆ. ಆದರೂ ಸಹ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಇಳಿಕೆಯಾಗಿಲ್ಲ’ ಎಂದು ವಾಗ್ದಾಳಿ ನಡೆಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News