ಧಾರವಾಡ : ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಅವರು ಇಂದು ಬೆಳಿಗ್ಗೆ ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ ಕ್ಯಾಂಟೀನ್ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಚಾಲನೆ ನೀಡಿ, ಮಾತನಾಡಿದರು.


ಇಂದಿರಾ ಕ್ಯಾಂಟೀನ್ ಅನ್ನುವುದು, ರಾಜ್ಯ ಸರಕಾರದ ಮಹತ್ವದ ಕೊಡುಗೆಯಾಗಿದೆ. ಜಿಲ್ಲೆಯ ಅವಳಿ ನಗರದಲ್ಲಿ 9 ಇಂದಿರಾ ಕ್ಯಾಂಟೀನ್‍ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ಇಂದಿರಾ ಕ್ಯಾಂಟೀನ್‍ದಿಂದ ಪ್ರತಿದಿನ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ. ಅದರಂತೆ ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.


ಇಂದಿರಾ ಕ್ಯಾಂಟೀನ್ ರುಚಿ ಸವಿದ ಸಚಿವ, ಡಿಸಿ: ಸಚಿವ ಸಂತೋಷ ಲಾಡ್ ಅವರು ಇಂದು ಧಾರವಾಡ ನಗರದಲ್ಲಿ ಇಂದಿರಾ ಕ್ಯಾಂಟೀನ್‍ದಲ್ಲಿ ಹೊಸ ದರದ ಪಟ್ಟಿ ಬಿಡುಗಡೆ ಮಾಡಿ, ವಿವಿಧ ಪ್ರಕಾರದ ಉಪಹಾರ ಸವಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.