ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲೂ ಇಂದಿರಾ ಕ್ಯಾಂಟೀನ್ ಮಾದರಿಯ ಕ್ಯಾಂಟೀನ್ಗಳು ಆರಂಭವಾಗಬೇಕೆಂದು ಸಂವಾದ ಸಂಸ್ಥೆಯ ಒಡನಾಡಿ ಪ್ರಣೇಶ್ ನೆಲ್ಯಾಡಿ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಸರ್ಕಾರಿ ಶಾಲಾ ಕಾಲೇಜಿನಲ್ಲಿನ ವಿದ್ಯಾರ್ಥಿಗಳು ತಮ್ಮ ಹಣಕಾಸಿನ, ವೈಯಕ್ತಿಕ ಹಾಗೂ ದೂರದ ಊರಿನಿಂದ ಬರುವ ಕಾರಣಕ್ಕೆ  ತಮ್ಮ ಶೈಕ್ಷಣಿಕ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಾರೆ. ಹೆಚ್ಚಾಗಿ ಸರ್ಕಾರಿ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವವರು ಆರ್ಥಿಕವಾಗಿ ಹಿಂದುಳಿದಿರುವ ಹಿನ್ನಲೆಯಿಂದ ಬಂದವರಾಗಿರುತ್ತಾರೆ‌ ಹಾಗೂ ಸರಿಯಾದ ಕ್ಯಾಂಟೀನ್ ವ್ಯವಸ್ಥೆಯು ಇಲ್ಲದೆ ಮದ್ಯಾಹ್ನದ ಆಹಾರ ಸಹ ಪಡೆಯಲು ಸಾದ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
      
ಕೆಲವು ವಿದ್ಯಾರ್ಥಿಗಳು ವೈಯಕ್ತಿಕ ಕಾರಣದಿಂದ ಮನೆಯಿಂದ ಬುತ್ತಿ ಕಟ್ಟಿ ಊಟವನ್ನು ತರಲಾಗುವುದಿಲ್ಲ. ಬಹು ದೂರದಿಂದ ಬರುವ ಎಷ್ಟೋ ವಿದ್ಯಾರ್ಥಿಗಳು ಬೆಳಿಗ್ಗಿನ ಉಪಹಾರ ಸೇವಿಸದೇ ಬರುವುದೂ ಇದೆ. ಮದ್ಯಾಹ್ನ ಹೋಟೇಲ್ ಗಳಲ್ಲಿ ಊಟ ಮಾಡಬಹುದೆಂದರೆ  ದಿನಾಲೂ ಹಣ ಕೊಟ್ಟು ಊಟ ಮಾಡಲು ಹೆಚ್ಚಿನವರಿಗೆ ಸಾಧ್ಯವಾಗುವುದಿಲ್ಲ.  ಹಣ ಇದ್ದರೂ ಕೆಲವು ಕಾಲೇಜುಗಳಲ್ಲಿ ಕ್ಯಾಂಟೀನ್ ಗಳೇ ಇರುವುದಿಲ್ಲ. ಸರ್ಕಾರಿ ಕಾಲೇಜುಗಳ ಕಟ್ಟಡಕ್ಕೆ ಪೇಟೆಯಿಂದ ಬಹುದೂರ ಜಮೀನು ನೀಡಿರುವುದರಿಂದ ಕಾಲೇಜಿನ ಅಕ್ಕ ಅಂಗಡಿ ಹೋಟೇಲ್ ಗಳು ಇರುವುದಿಲ್ಲ.
 
ರಾಜ್ಯದಲ್ಲಿ ಸುಮಾರು 24ಕ್ಕೂ ಹೆಚ್ಚು ವಿವಿಗಳು, 3800ಕ್ಕೂ ಹೆಚ್ಚು ಸರಕಾರಿ ಕಾಲೇಜುಗಳಿವೆ. ಇವುಗಳಲ್ಲಿ ಅಂದಾಜು 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಸರಕಾರ ಅಂಕಿ ಅಂಶಗಳ ಆಧಾರವಾಗಿ ತುರ್ತು ಅಗತ್ಯವೆನ್ನಿಸುವ, ಹೆಚ್ಚಿನ ವಿದ್ಯಾರ್ಥಿಗಳಿರುವ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆದರೆ ಅದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. 


ಹೀಗಾಗಿ ಸರ್ಕಾರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲೇ ಇಂದಿರಾ ಕ್ಯಾಂಟೀನ್  ಮಾದರಿಯ ವ್ಯವಸ್ಥೆ ಆರಂಭವಾಗಲಿ. ಇದರಿಂದ ಅನೇಕ ಬಡ ವಿದ್ಯಾರ್ಥಿಗಳಿಗೆ ಕನಿಷ್ಟ ಆಹಾರ ದೊರಕುವ ಜತೆಗೆ ಇಲ್ಲಿ‌ ಪೌಷ್ಟಿಕ ಆಹಾರ ದೊರಕುವುದರಿಂದ ವಿದ್ಯಾರ್ಥಿಗಳು ಆರೋಗ್ಯಕರವಾಗಿ‌ ಇರಲು ಸಾಧ್ಯ.ಸರ್ಕಾರಿ ಕಾಲೇಜುಗಳಲ್ಲಿ ಮಧ್ಯಾಹ್ನದ ಊಟವನ್ನು ಲಭ್ಯವಾದರೆ ಸರ್ಕಾರಿ ಕಾಲೇಜುಗಳ ಶಿಕ್ಷಣದ ಪ್ರವೇಶವನ್ನು ಉತ್ತೇಜಿಸಲು ಸಾಧ್ಯವಾಗುತ್ತದೆ ಎಂದು ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.