ಐದು ರೂ.ಗೆ ಊಟ, ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್ ರಾಷ್ಟ್ರಕ್ಕೆ ಮಾದರಿ: ಸಚಿವ ಸಂತೋಷ ಲಾಡ್

Indira Canteen: ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ ಕ್ಯಾಂಟೀನ್ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಚಾಲನೆ ನೀಡಿ ಕಾರ್ಮಿಕ ಸಚಿವ ಸಂತೋಷ ಲಾಡ್  ಅವರು ಮಾತನಾಡಿದರು. 

Written by - Yashaswini V | Last Updated : Sep 12, 2024, 03:07 PM IST
  • ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಮಹತ್ವದ ಕೊಡುಗೆಯಾಗಿದೆ.
  • ಜಿಲ್ಲೆಯ ಅವಳಿ ನಗರದಲ್ಲಿ 9 ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ.
  • ಪ್ರತಿ ಇಂದಿರಾ ಕ್ಯಾಂಟೀನ್‍ದಿಂದ ಪ್ರತಿದಿನ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ.
ಐದು ರೂ.ಗೆ ಊಟ, ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್ ರಾಷ್ಟ್ರಕ್ಕೆ ಮಾದರಿ: ಸಚಿವ ಸಂತೋಷ ಲಾಡ್ title=

Indira Canteen: ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ನಲ್ಲಿ (Indira Canteen) ಇಂದಿರಾ ಕ್ಯಾಂಟೀನ್ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಚಾಲನೆ ನೀಡಿ ಅವರು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ ಲಾಡ್, ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಮಹತ್ವದ ಕೊಡುಗೆಯಾಗಿದೆ. ಜಿಲ್ಲೆಯ ಅವಳಿ ನಗರದಲ್ಲಿ 9 ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ಇಂದಿರಾ ಕ್ಯಾಂಟೀನ್‍ದಿಂದ ಪ್ರತಿದಿನ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ. ಅದರಂತೆ ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು. 

ಇದನ್ನೂ ಓದಿ- ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿಎಂ ಮಹತ್ವದ ಘೋಷಣೆ

ಇಂದಿರಾ ಕ್ಯಾಂಟೀನ್ ರುಚಿ ಸವಿದ ಸಚಿವರು: 
ಇಂದಿರಾ ಕ್ಯಾಂಟೀನ್‍ನಲ್ಲಿ ಹೊಸ ದರದ ಪಟ್ಟಿ ಬಿಡುಗಡೆ ಮಾಡಿದ ಸಚಿವರು ವಿವಿಧ ಪ್ರಕಾರದ ಉಪಹಾರ ಸೇವಿಸಿದರು. ಐದು ರೂ. ಹಣ ಕೊಟ್ಟು ಟೋಕನ್ ಖರೀದಿಸಿದ ಸಚಿವರು ನಂತರ ಜೋಳದ ರೊಟ್ಟಿ ಊಟ ಸವಿದರು. 

ಈ ಸಂದರ್ಭದಲ್ಲಿ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಪಾಲಿಕೆ ಸದಸ್ಯ ಡಾ.ಮಯೂರ ಮೋರೆ, ಸೇರಿದಂತೆ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

ಇದನ್ನೂ ಓದಿ- ಇಂದಿರಾ ಕ್ಯಾಂಟೀನ್ ನಲ್ಲಿ ರಿಯಾಯಿತಿ ದರದಲ್ಲಿ ಸ್ವಾದಿಷ್ಟ ತಿಂಡಿ, ಊಟ ಲಭ್ಯ ..! ಹೊಸ ಮೆನುವಿನಲ್ಲಿ ಏನೇನಿದೆ..?

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 9 ಇಂದಿರಾ ಕ್ಯಾಂಟೀನ್‍ಗಳಿಗೆ ಎರಡು ಪ್ಯಾಕೇಜ್‍ಗಳ ಮೂಲಕ ಆಹಾರ ಸರಬರಾಜು ಮಾಡಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News