ನಿಮಾನ್ಸ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ! ಈ ಸಾವು ನ್ಯಾಯವೇ?
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯ ಯುವಕ ಅಪಘಾತದಲ್ಲಿ ಗಂಭೀರ ಗಾಯ ಗೊಂಡಿದ್ದರು. ಇವರನ್ನು ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಬೆಡ್ ಸಿಗದೆ ಆಂಬ್ಯುಲೆನ್ಸ್‌ನಲ್ಲಿಯೇ ಪ್ರಾಣಬಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ: ಜೀವವನ್ನು ನೀಡುವುದು ದೇವರಾದರೆ, ಹೋಗುವ ಪ್ರಾಣವನ್ನು ಉಳಿಸುವುದು ವೈದ್ಯರು. ದೇಗುಲಗಳು ಸಹ ಕೇಳದಷ್ಟು ಪ್ರಾರ್ಥನೆ, ಆಕ್ರಂದನಗಳನ್ನು ಆಸ್ಪತ್ರೆಯ ಗೋಡೆಗಳು ಕೇಳಿರುತ್ತವೆ. ಅನಾರೋಗ್ಯದಿಂದಲೋ ಅಥವಾ ಅಪಘಾತಗಳಲ್ಲಿ ಗಂಭೀರವಾಗಿ ಗಾಯಗೊಂಡೋ ಬರುವ ವ್ಯಕ್ತಿಗಳಿಗೆ ಆಸರೆಯಾಗಬೇಕಿರುವುದು ಆಸ್ಪತ್ರೆಗಳು. ಆದರೆ ಇಲ್ಲಿ ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ನರಳಿ ನರಳಿ ಆಂಬ್ಯಲೆನ್ಸ್‌ನಲ್ಲಿಯೇ ಪ್ರಾಣಬಿಟ್ಟ ಘಟನೆ ನಡೆದಿದೆ.
ಇದನ್ನೂ ಓದಿ: ಮನೆಯ ಹಿತ್ತಲದಲ್ಲಿ ಅರಳಿದ 'ರಾತ್ರಿ ರಾಣಿ': ಕತ್ತಲಲಿ ಪರಿಮಳ ಸೂಸಿ, ಮುಂಜಾನೆ ಮುದುಡಿದ ಬ್ರಹ್ಮ ಕಮಲ
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯ ಯುವಕ ಅಪಘಾತದಲ್ಲಿ ಗಂಭೀರ ಗಾಯ ಗೊಂಡಿದ್ದರು. ಇವರನ್ನು ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಬೆಡ್ ಸಿಗದೆ ಆಂಬ್ಯುಲೆನ್ಸ್‌ನಲ್ಲಿಯೇ ಪ್ರಾಣಬಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಆರೋಗ್ಯ ಸಚಿವರ ತವರು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ರವಿಕುಮಾರ್ ಎಂಬುವವರು ತನ್ನ ತಂಗಿಯ ಮದುವೆ ತಯಾರಿ ನಡೆಸುತ್ತಿದ್ದರು. ರವಿ ಸೋಮವಾರ ಶಿಡ್ಲಘಟ್ಟ ನಗರದಿಂದ ಸದ್ದಹಳ್ಳಿಗೆ ತನ್ನ ದ್ವಿಚಕ್ರವಾಹನದಲ್ಲಿ ತೆರಳುವಾಗ ಬೈಕ್ ಗೆ ಟ್ರಾಕ್ಟರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ಅಪಘಾತದಲ್ಲಿ ಗಾಯಗೊಂಡ ಅವರಿಗೆ ಚಿಕಿತ್ಸೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅಲ್ಲಿ ಬೆಡ್ ಸಿಗದೆ ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಅಲ್ಲಿಯೂ ಸಹ ಬೆಡ್ ಸಿಗದೆ ಆಂಬ್ಯುಲೆನ್ಸ್ ನಲ್ಲೇ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ರವಿ ಸಾವಿನಿಂದ ಕುಟುಂಬಸ್ಥರಿಗೆ ದಿಕ್ಕುತೋಚದಂತಾಗಿದೆ.
ಇದನ್ನೂ ಓದಿ: ಸಿಇಟಿ ಪರೀಕ್ಷೆಗೂ ಹಿಜಾಬ್ ಧರಿಸುವಂತಿಲ್ಲ: ಸಚಿವ ಅಶ್ವತ್ಥ ನಾರಾಯಣ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.