ಕೇಂದ್ರದಿಂದ ಬರುವ ಅಕ್ಕಿ ಕಡಿತ ಮಾಡಿರುವ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ : ಬಸವರಾಜ ಬೊಮ್ಮಾಯಿ
Basavaraj Bommai : ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರು: ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕೊಡುವ ಉಚಿತ ಅಕ್ಕಿಯನ್ನೂ ಈ ತಿಂಗಳು ರಾಜ್ಯ ಸರ್ಕಾರ ಎರಡು ಕೆಜಿ ಕಡಿಮೆ ಮಾಡಿದೆ. ಚುನಾವಣೆ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಈಗ ಮೂರು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ-ಕಾಳಿಂಗ ಸರ್ಪವನ್ನು ನಿಯಂತ್ರಿಸುತ್ತಿರುವ ಪುಟ್ಟ ಬಾಲಕನ ವಿಡಿಯೋ
ರಾಜ್ಯದಲ್ಲಿ ಭ್ರಷ್ಟಾಚಾರದ ಬಗ್ಗೆ ನಾನು ಈಗಾಗಲೇ ಮಾತನಾಡಿದ್ದೆ, ಕುಮಾರಸ್ವಾಮಿಯವರು ವರ್ಗಾವಣೆಗೆ ಒಂದು ಇಲಾಖೆಯ ದರ ಪಟ್ಡಿ ಬಿಡಿಗಡೆ ಮಾಡಿದ್ದಾರೆ. ಅವರು ಬಿಡುಗಡೆ ಮಾಡಿರುವುದು ಸರಿ ಇದಿಯಾ ಅಥವಾ ಇನ್ನೂ ಜಾಸ್ತಿ ಇದಿಯಾ ? ಸರ್ಕಾರ ಈ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ-ರಾಜ್ಯದಲ್ಲಿ 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ: ಎಂ.ಬಿ ಪಾಟೀಲ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ