ಬೆಂಗಳೂರು: ನಗರದಲ್ಲಿಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಸಂಬಂಧ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ರಾಜ್ಯದ ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಕಂಟ್ರೋಲ್ ರೂಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಕಂಟ್ರೋಲ್ ರೂಂಗಳಲ್ಲಿ ಬರುವಂತಹ ದೂರುಗಳನ್ನು ಸ್ವೀಕರಿಸಿದ ಕೂಡಲೆ ದೂರುಗಳಿಗೆ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಗಳ ಗಮನಕ್ಕೆ ತಂದು ತ್ವರಿತಗತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸೂಚನೆ ನೀಡಿದರು.
ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮಳೆ ಬೀಳುವ ಸಮಯದಲ್ಲಿ ಗಾಳಿಯಿಂದ ಬೀಳುವಂತಹ ಮರಗಳು/ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲು, ರಸ್ತೆಗಲ್ಲಿ ನಿಂತಿರುವ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗುವಂತೆ ಮಾಡಲು, ಜಲಾವೃತವಾಗಿರುವಂತಹ ಸ್ಥಳಗಳಲ್ಲಿ ನೀರನ್ನು ತೆರವುಗೊಳಿಸುವ ಸಲುವಾಗಿ ಅವಶ್ಯಕತೆಯಿರುವ ಸಲಕರಣೆಗಳು, ನೀರು ಹೊರ ಹಾಕುವ ಪಂಪ್ ಹಾಗೂ ಸಿಬ್ಬಂದಿಗಳ ವ್ಯವಸ್ಥೆ ಮಾಡಿಕೊಂಡು ಎಲ್ಲಾ ರೀತಿಯಲ್ಲಿ ಸಿದ್ಧ್ದವಾಗಿರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.