ಬೆಂಗಳೂರು: ನಗರದ ವಿ.ವಿ ಪುರಂನಲ್ಲಿರುವ ಫುಡ್ ಸ್ಟ್ರೀಟ್’ನ್ನು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, 2023ರ ಆಗಸ್ಟ್ ತಿಂಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ರಾಶಿಯವರ ಅದೃಷ್ಟ ಬೆಳಗಿ ಸಂಪತ್ತು ವೃದ್ಧಿಸುವನು ಶುಕ್ರದೇವ: ಸೋಲು ಬಳಿಯೂ ಸುಳಿಯದಂತೆ ಕಾಯುವನು!


ವಿವಿ ಪುರಂ ಫುಡ್ ಸ್ಟ್ರೀಟ್ ನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿವಿ ಪುರಂನ ಫುಡ್ ಸ್ಟ್ರೀಟ್ ನಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು” ಎಂದು ಹೇಳಿದರು.


ವಿ.ವಿ. ಪುರಂ ತಿಂಡಿಬೀದಿಯಲ್ಲಿ ಎಲ್ಲಾ ವ್ಯಾಪಾರಿಗಳ ಸಹಯೋಗದೊಂದಿಗೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ಥಳದಲ್ಲಿದ್ದ ಸಮಸ್ಯೆಗಳನ್ನೆಲ್ಲಾ ಬಗೆಹರಿಸಿಕೊಂಡು ಕಾಮಗಾರಿಯನ್ನು ನಡೆಸಲಾಗುತ್ತಿದ್ದು, ಒಂದು ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ನವೀಕರಣಗೊಂಡು ತಿಂಡಿ ಬೀದಿಯನ್ನು ಉದ್ಘಾಟನೆಗೊಳಿಸಲಾಗುವುದು ಎಂದು ಶಾಸಕ ಉದಯ್ ಬಿ. ಗರುಡಾಚಾರ್ ತಿಳಿಸಿದರು.


ಪ್ರಸ್ತುತ ಕಾಮಗಾರಿಯ ಸ್ಥಿತಿಗತಿ:


  • ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆನೀರು ಕಾಲುವೆ ಸಂಪರ್ಕ, ಕೇಬಲ್‌ ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್‌ ಗೆ ಸಂಬಂಧಿಸಿದ ಕಾಮಗಾರಿ ಮುಕ್ತಾಯಗೊಂಡಿರುತ್ತದೆ.ರಸ್ತೆಗೆ ಅನುಗುಣವಾಗಿ ಬೆಡ್ ಕಾಂಕ್ರಿಟ್ ಹಾಕಲಾಗಿದೆ.

  • ಬಾಕಿ ಕಾಮಗಾರಿಯ ವಿವರ:

  • ಕ್ಯಾರೇಜ್ ವೇಯಲ್ಲಿ ವರ್ಣರಂಜಿತ ಬಣ್ಣದ ಕಾಂಕ್ರೀಟ್ ರಸ್ತೆ ನಿರ್ಮಾಣ.

  • ಕರ್ಬ್ ಸ್ಟೋನ್ ಗಳ ಅಳವಡಿಕೆ.

  • ಪಾದಚಾರಿ ಮಾರ್ಗ ನಿರ್ಮಾಣ.

  • ಎಚ್‌ಡಿಡಿ ಕೇಬಲ್‌ಗಳೊಂದಿಗೆ ಬೀದಿ ದೀಪದ ಕಂಬಗಳ ಅಳವಡಿಕೆ.

  • ಎಲ್ಲಾ ಅಂಗಡಿಗಳಿಗೆ ಕೆನೋಪಿಗಳ ಅಳವಡಿಕೆ.

  • ಪ್ರವೇಶ ಪ್ಲಾಜಾ.

  • ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಯ ಸುತ್ತಮುತ್ತ ಸುಂದರೀಕರಣಗೊಳಿಸುವುದು.


ಈ ವೇಳೆ ವಲಯ ಮುಖ್ಯ ಅಭಿಯಂತರ ರಾಜೇಶ್, ಕಾರ್ಯಪಾಲಕ ಅಭಿಯಂತರ ಮಹಂತೇಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.


ಇದನ್ನೂ ಓದಿ: ಈ ರಾಶಿಯವರ ಜಾತಕದಲ್ಲಿ ಲಕ್ಷ್ಮೀ ನಾರಾಯಣ ಯೋಗ: ಹೆಜ್ಜೆಹೆಜ್ಜೆಗೂ ಯಶಸ್ಸು-ಹರಿದುಬರಲಿದೆ ಅಪಾರ ಧನಸಂಪತ್ತು!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ