ಬೆಂಗಳೂರು: ನಗರದಲ್ಲಿ 3ಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳಗಳಲ್ಲಿ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತದಾರರ ಸೇವಾ ಕೇಂದ್ರ ಹಾಗೂ ಮತಗಟ್ಟೆಯ ಎಲ್ಲಾ ಮಾಹಿತಿಯುಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಲ್ಲಂಗಡಿ ಹಣ್ಣು ತಿಂದ ಬಳಿಕ ಈ ಆ


ಹಾರಗಳನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ…


ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ವಿಷಯಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1409 ಕಡೆ 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರಲಿದ್ದು, 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರುವ ಕಡೆ ಮತದಾರರ ಸೇವಾ ಕೇಂದ್ರ ಸ್ಥಾಪಿಸಬೇಕು. ಜೊತೆಗೆ ಮಾಡಲ್ ಲೇಔಟ್ ಪ್ಲಾನ್ ಮಾಡಿಕೊಂಡು ಮತಗಟ್ಟೆಗಳ ಸ್ಥಳದಲ್ಲಿ ಏನೆಲ್ಲಾ ವ್ಯವಸ್ಥೆಯಿದೆ, ಎಲ್ಲೆಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬುದರ ಸಂಪೂರ್ಣ ವಿವರಗಳುಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಬೇಕು. ಅಲ್ಲದೆ ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು ಎಂದು ಹೇಳಿದರು.


ಪಾರ್ಕಿಂಗ್ ವ್ಯವಸ್ಥೆ ಮಾಡಿ:


ಪಾರ್ಕಿಂಗ್ ವ್ಯವಸ್ಥೆಯಿರುವ ಮತಗಟ್ಟೆಗಳ ಸ್ಥಳದಲ್ಲಿ ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸಬೇಕು. ಜೊತೆಗೆ ಪಾರ್ಕಿಂಗ್ ಸ್ಥಳದಲ್ಲಿ ಎಷ್ಟು ವಾನಗಳನ್ನು ನಿಲ್ಲಿಸಬಹುದು ಎಂಬುದರ ಮಾಹಿತಿ ನೀಡಬೇಕು.ವಾಹನಗಳು ಸರಿಯಾದ ಕ್ರಮದಲ್ಲಿ ನಿಲುಗಡೆ ಮಾಡುವ ಸಲುವಾಗಿ ಸ್ವಯಂ ಸೇವಕರನ್ನು ನಿಯೋಜಿಸಲು ಸೂಚನೆ ನೀಡಿದರು.


ವಿವಿಧ ಮಾದರಿಯ ಮತಗಟ್ಟೆಗಳ ಅನುಷ್ಠಾನ:


 ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸಾಮಾನ್ಯ ಮತಗಟ್ಟೆಗಳ ಜೊತೆಗೆ ಸಖಿ(ಪಿಂಕ್) ಮತಗಟ್ಟೆ, ಯೂತ್ ಮತಗಟ್ಟೆ, ಥೀಮ್ ಆಧಾರಿತ, ಮತಗಟ್ಟೆ, ವಿಶೇಷ ಚೇತರ ಮತಗಟ್ಟೆ ಮಾದರಿಯ ಮತಗಟ್ಟೆಗಳನ್ನು ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.


ಮತಗಟ್ಟೆಗಳಲ್ಲಿ ಗಾಲಿ ಕುರ್ಚಿಗಳ ವ್ಯವಸ್ಥೆ:


ಮತಗಟ್ಟೆಗಳಿಗೆ ವಿಶೇಷ ಚೇತನರು ಮತದಾನ ಮಾಡಲು ಬರುತ್ತಾರೆ. ಈ ನಿಟ್ಟಿನಲ್ಲಿ ವಿಶೇಷ ಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಾಲಿ ಕುರ್ಚಿಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಜೊತೆಗೆ ವಿಶೇಷ ಚೇತನರನ್ನು ಕರೆದೊಯ್ಯಲು ಸ್ವಯಂ ಸೇವಕರನ್ನು ನಿಯೋಜನೆ ಮಾಡಬೇಕೆಂದು ಸೂಚಿಸಿದರು.


ಇದನ್ನೂ ಓದಿ: RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿ


ಮೆಡಿಕಲ್ ಕಿಟ್ ಹಾಗೂ ಆಂಬುಲೆನ್ಸ್ ವ್ಯವಸ್ಥೆ:


ಮತಗಟ್ಟೆಗಳ ಬಳಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮತಗಟ್ಟೆಗಳಲ್ಲಿ ಮೆಡಿಕಲ್ ಕಿಟ್ ವ್ಯವಸ್ಥೆಯ ಜೊತೆಗೆ ತುರ್ತು ಕ್ರಮಕ್ಕಾಗಿ ಆಂಬುಲೆನ್ಸ್ ನ ವ್ಯವಸ್ಥೆ ಮಾಡಿಕೊಂಡಿರಬೇಕು. ಮತದಾರರ ಅನುಕೂಲಕ್ಕಾಗಿ ಸ್ಥಾಪಿಸಿರುವ ಹೆಲ್ಪ್ ಡೆಸ್ಕ್ ಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕೆಂದು ಸೂಚನೆ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ