ಬಳ್ಳಾರಿ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


COMMERCIAL BREAK
SCROLL TO CONTINUE READING

ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು, ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಇದನ್ನೂ ಓದಿ: ಪ್ರಥಮ ಬಾರಿಗೆ ಶಾಸಕನಾದ ವ್ಯಕ್ತಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿ..! ಏಕೆ ಗೊತ್ತೆ..?


ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು, ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಇದನ್ನೂ ಓದಿ: ಸಾಂವಿಧಾನಿಕವೇ ಅಥವಾ ಕಾನೂನುಬಾಹಿರವೇ?


ಸಭೆಯಲ್ಲಿ ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ, ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.