ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿರುವ ಮೂರ್ತಿ ಆಯ್ಕೆಯಾಗಿದೆ.
ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದು, ಸಂತಸ ಹಂಚಿಕೊಂಡಿದ್ದಾರೆ. ‘"ಎಲ್ಲಿ ರಾಮನೋ ಅಲ್ಲಿ ಹನುಮನು" ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ-ಹನುಮರ ಅವಿನಾಭಾವ ಸಂಬಂಧಕ್ಕೆ ಇದು ಮತ್ತೊಂದು ನಿದರ್ಶನ. ಹನುಮನ ನಾಡು ಕರ್ನಾಟಕದಿಂದ ರಾಮಲಲ್ಲಾನಿಗೆ ಇದೊಂದು ಮಹತ್ವಪೂರ್ಣ ಸೇವೆ ಎಂದರೆ ತಪ್ಪಾಗಲಾರದು’ ಎಂದು ಖುಷಿಪಟ್ಟಿದ್ದಾರೆ.
"ಎಲ್ಲಿ ರಾಮನೋ ಅಲ್ಲಿ ಹನುಮನು"
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಶ್ರೀ @yogiraj_arun ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು… pic.twitter.com/VQdxAbQw3Q
— Pralhad Joshi (@JoshiPralhad) January 1, 2024
‘ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪಟ್ಟಾಭಿಷೇಕದಲ್ಲಿ ವಿಶೇಷ ಪಾತ್ರ ವಹಿಸಿದ್ದನ್ನು ನೆನಪಿಸುವಂತೆ ಈಗ ಮತ್ತೊಂದು ಸುಯೋಗ ಒದಗಿಬಂದಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಪ್ರಭು ಶ್ರೀರಾಮನ ವಿಗ್ರಹ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೆ ಆಯ್ಕೆಯಾಗಿದ್ದು, ವಿಶೇಷವಾಗಿ ರಾಜ್ಯದ ಸಮಸ್ತ ಭಕ್ತ ಜನತೆಯ ಹೆಮ್ಮೆ, ಸಂತಸಗಳನ್ನು ದುಪ್ಪಟ್ಟುಗೊಳಿಸಿದೆ. ರಾಜ್ಯಕ್ಕೂ ರಾಮಮಂದಿರಕ್ಕೂ ಮತ್ತೊಂದು ವಿಶೇಷ ನಂಟನ್ನು ಸಾಧ್ಯವಾಗಿಸಿರುವ ಶಿಲ್ಪಿ ಯೋಗಿರಾಜ್ ಅವರಿಗೆ ಅಭಿಮಾನಪೂರ್ವಕ ಅಭಿನಂದನೆಗಳು’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪಟ್ಟಾಭಿಷೇಕದಲ್ಲಿ ವಿಶೇಷ ಪಾತ್ರ ವಹಿಸಿದ್ದನ್ನು ನೆನಪಿಸುವಂತೆ ಈಗ ಮತ್ತೊಂದು ಸುಯೋಗ ಒದಗಿಬಂದಿದೆ. ಮೈಸೂರಿನ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಪ್ರಭು ಶ್ರೀರಾಮನ ವಿಗ್ರಹ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೆ…
— B.S.Yediyurappa (@BSYBJP) January 1, 2024
ಇದನ್ನೂ ಓದಿ: ಗುರು ಮೋದಿಯಂತೆ ದಿಕ್ಕು ತಪ್ಪಿಸುವಲ್ಲಿ ಪ್ರತಾಪ್ ಸಿಂಹ ‘ಬ್ರಿಲಿಯಂಟ್ ಪೊಲಿಟಿಷಿಯನ್’..!
“ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನು
ಮೈಸೂರಿನ ಬಾಲರಾಮನು ಬೆಳಗುವನು”ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿರುವುದು ಮೈಸೂರಿನ ಹಿರಿಮೆ,… pic.twitter.com/y5qxaXbmDf
— Vijayendra Yediyurappa (@BYVijayendra) January 1, 2024
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಟ್ವೀಟ್ ಮಾಡಿದ್ದು, ‘ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನು ಮೈಸೂರಿನ ಬಾಲರಾಮನು ಬೆಳಗುವನು. ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿರುವುದು ಮೈಸೂರಿನ ಹಿರಿಮೆ, ಕರುನಾಡ ಹೆಮ್ಮೆಯಾಗಿದೆ’ ಎಂದು ಸಂತಸ ಹಂಚಿಕೊಂಡಿದ್ದಾರೆ.
ಕರ್ನಾಟಕದ ಹೆಮ್ಮೆಯ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀ ರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.ಮೈಸೂರು ಮೂಲದ ಪ್ರಖ್ಯಾತ ಶಿಲ್ಪಿ ಶ್ರೀ @yogiraj_arunಅವರು ಆಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ರಾಮಮಂದಿರದ ವಿಗ್ರಹದ ಕೆತ್ತನೆಯನ್ನು ನೆರವೇರಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ pic.twitter.com/o1NTPiEMjT
— Pratap Simha (@mepratap) January 1, 2024
‘ರಾಮನ ಭಂಟ ಹನುಮಂತನು ಹುಟ್ಟಿರುವ ನಮ್ಮ ಕನ್ನಡನಾಡಿನಲ್ಲಿ, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಅದೇ ರೀತಿ ಶ್ರೀರಾಮನ ವಿಗ್ರಹವೂ ಕರ್ನಾಟಕದ ಶಿಲ್ಪಿಯಿಂದಲೇ ಕೆತ್ತನೆಯಾಗಿರುವುದು ಭಾವನಾತ್ಮಕ ಭಕ್ತಿ ತರಿಸಿದೆ. ಅಂತಾರಾಷ್ಟ್ರೀಯ ಗಮನ ಸೆಳೆದ ಕೇದಾರನಾಥದ ಆದಿ ಶಂಕರಚಾರ್ಯ, ದೆಹಲಿಯ ಇಂಡಿಯಾ ಗೇಟ್ ಬಳಿಯ ಸುಭಾಷ್ ಚಂದ್ರ ಬೋಸ್, ಇದೀಗ ವಿಶ್ವ ಹಿಂದೂಗಳ ಹೃದಯದಲ್ಲಿ ನೆಲೆಸಲಿರುವ ಅಯೋಧ್ಯೆಯ ಬಾಲ ರಾಮನ ಮೂರ್ತಿಯ ವಿಗ್ರಹ ರೂಪಿಸಿ, ರಾಜ್ಯಕ್ಕೆ ಶ್ರೇಷ್ಠ ಕೀರ್ತಿ ತಂದ ಶಿಲ್ಪಿ ಅರುಣ್ ಯೋಗಿರಾಜ್ ಹಾಗೂ ಈ ಕಾರ್ಯದಲ್ಲಿ ಹೆಗಲುಕೊಟ್ಟ ಅವರ ತಂಡದವರಿಗೆ ತುಂಬು ಹೃದಯದ ಅಭಿನಂದನೆಗಳು’ ಎಂದು ಹೇಳಿದ್ದಾರೆ.
ಸಂಸದ ಪ್ರತಾಪ್ ಸಿಂಹ ಸಹ ಟ್ವೀಟ್ ಮಾಡಿದ್ದು, ‘ಕರ್ನಾಟಕದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ. ಮೈಸೂರು ಮೂಲದ ಪ್ರಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಆಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ರಾಮಮಂದಿರದ ವಿಗ್ರಹದ ಕೆತ್ತನೆಯನ್ನು ನೆರವೇರಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ’ ಅಂತಾ ಖುಷಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವರ್ಷದ ಕೊನೆ ದಿನ ದಾಖಲೆಯ ಮದ್ಯ ಮಾರಾಟ: ಒಂದೇ ದಿನದಲ್ಲಿ 18.85 ಕೋಟಿ ರೂ. ವಹಿವಾಟು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.