'ದಿ ಕಾಶ್ಮೀರಿ ಫೈಲ್ ಸಿನಿಮಾ ಬದಲು, ಪರ್ಜಾನಿಯಾ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ'

ದಿ ಕಾಶ್ಮೀರಿ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ಪರ್ಜಾನಿಯಾ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಚರ್ಚೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : Mar 15, 2022, 04:25 PM IST
  • ಸರ್ಕಾರ ಯಾಕೆ ಬಲವಂತವಾಗಿ ಸಿನಿಮಾ ತೋರಿಸುವುದಕ್ಕೆ ಹೊರಟಿದೆ? ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು? ಎಂದು ಪ್ರಶ್ನಿಸಿದ್ದಾರೆ.
'ದಿ ಕಾಶ್ಮೀರಿ ಫೈಲ್ ಸಿನಿಮಾ ಬದಲು, ಪರ್ಜಾನಿಯಾ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ' title=

ಬೆಂಗಳೂರು: ದಿ ಕಾಶ್ಮೀರಿ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ಪರ್ಜಾನಿಯಾ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಚರ್ಚೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ದಿ ಕಾಶ್ಮೀರ್ ಫೈಲ್ಸ್’(The Kashmir File) ಸಿನಿಮಾಕ್ಕೆ ತೆರಿಗೆ ರಹಿತ ಚಿತ್ರವೆಂದು ಘೋಷಿಸಿರುವುದಲ್ಲದೆ,ವಿಧಾನಸಭೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಚಿತ್ರವನ್ನು ವೀಕ್ಷಿಸಲು ಸಚಿವರು ಹಾಗೂ ಶಾಸಕರಿಗೆ ವ್ಯವಸ್ಥೆ ಮಾಡಿರುವುದಾಗಿ ಘೋಷಿಸಿರುವ ಬೆನ್ನಲ್ಲೇ ಬಿ.ಕೆ ಹರಿಪ್ರಸಾದ್ (BK Hariprasad) ಅವರು ವಿಧಾನ ಪರಿಷತ್ ನ ಚರ್ಚೆಯಲ್ಲಿ ಭಾಗವಹಿಸಿ ದಿ ಕಾಶ್ಮೀರಿ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ಪರ್ಜಾನಿಯ ಸಿನಿಮಾವನ್ನು ತೋರಿಸುವಂತೆ ಎಂದು ಸರ್ಕಾರಕ್ಕೆ ಆಗ್ರಹಿಸಿದರು. 

'ಗುಜರಾತ್ ಹತ್ಯಾಕಾಂಡದ ಕುರಿತು ‘ಫರ್ಜಾನಾ ’ಮತ್ತು ವಾರಣಾಸಿ ದಲಿತ ಮಹಿಳೆಯ ಅತ್ಯಾಚಾರದ ಕುರಿತು ‘ವಾಟರ್’ ಅಂತ ಎರಡು ಸಿನಿಮಾ ಇವೆ, ಅವನ್ನೂ ತೋರಿಸಿ.ನಾವು ಯಾವ ಸಿನಿಮಾ ನೋಡಬೇಕು ಅಂತ ಸದನದಲ್ಲಿ ಹೇಳೋ ಹಾಗಿಲ್ಲ. ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ.ನಾವೂ ಹಾಗಾದ್ರೆ ಅದನ್ನು ನೋಡಬೇಕಾ? ಸರ್ಕಾರ ಪಿಚ್ಚರ್ ತೋರಿಸೋದಕ್ಕೆ ಇದೆಯಾ? ಸಭಾಪತಿ ನಿಷ್ಪಕ್ಷಪಾತಿ ಆಗಿರಬೇಕು.ಪೀಠದಿಂದ ಯಾಕೆ ಇದನ್ನು ಹೇಳಿಸ್ತೀರಾ? ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು? ಎಂದು ಪ್ರಶ್ನಿಸಿದ ಅವರು ಸದನದಲ್ಲಿ ಮಾಡಿದ ಘೋಷಣೆಯನ್ನು ವಾಪಸ್ ಪಡೆಯಬೇಕು ಎಂದು ಅವರು ಪಟ್ಟು ಹಿಡಿದರು.

ಇನ್ನೊಂದೆಡೆಗೆ ಕಾಂಗ್ರೆಸ್ ಪಕ್ಷದ ಸದಸ್ಯರು ಸರ್ಕಾರವು ತನ್ನ ನಿರ್ಧಾರವನ್ನು ವಾಪಸ್ ತೆಗೆದುಕೊಳ್ಳಬೇಕು ಎಂದು ಪಟ್ಟು ಹಿಡಿದು ಪರಿಷತ್ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದಾಗ ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ಇದನ್ನೂ ಓದಿ : ಕರ್ನಾಟಕ ಬಳಿಕ ಗೋವಾದಲ್ಲಿಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ

ಇದೇ ವೇಳೆ ಸಲೀಂ ಅಹ್ಮದ್ ಮಾತನಾಡಿ, ಸರ್ಕಾರ ಯಾಕೆ ಬಲವಂತವಾಗಿ ಸಿನಿಮಾ ತೋರಿಸುವುದಕ್ಕೆ ಹೊರಟಿದೆ? ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು? ಎಂದು ಪ್ರಶ್ನಿಸಿದ್ದಾರೆ.ಇದೇ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಸಿನಿಮಾ ವಿಚಾರವಾಗಿ ಮಾತಿನ ಗದ್ದಲ ತೀವ್ರಗೊಂಡಿತು, ಆಗ ಕಾಂಗ್ರೆಸ್ ಪಕ್ಷದ ಸದಸ್ಯರು ಪರಿಷತ್ ನ ಬಾವಿಗೆ ಇಳಿದು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ನಿಮ್ಮ ಆರ್ಭಟ ನಡೆಯುವುದಿಲ್ಲ ಎಂದು ಹೇಳಿದರು.

ಆಗ ಸದನವನ್ನು ಸಭಾಪತಿಗಳು ಸದನವನ್ನು ಮುಂದೂಡಿದರು, ನಂತರ ಹತ್ತು ನಿಮಿಷಗಳ ನಂತರ ಮತ್ತೆ ಅಧಿವೇಶನ ಪ್ರಾರಂಭವಾಯಿತು.ಈ ಸಂದರ್ಭದಲ್ಲಿ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕಾಶ್ಮೀರದ ಪಂಡಿತರ ಕೊಲೆಗಳಿಗೆ ಸಂಬಂಧಿಸಿದ ಆರ್ಟಿ ಐ ಪ್ರತಿಯನ್ನ ಓದಿದರು.ಆರ್ಟಿಐನಲ್ಲಿ ಶ್ರೀನಗರದ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.1990ರ ನಂತರ ಕಾಶ್ಮೀರಿ ಪಂಡಿತರ ಕೊಲೆಗಳ ಸಂಖ್ಯೆ 89, ಅದೇ ಅವಧಿಯಲ್ಲಿ ದಲಿತರು ಹಾಗೂ ಬೇರೆ ಸಮುದಾಯಕ್ಕೆ ಸೇರಿದ ಒಟ್ಟು 1635 ಜನರನ್ನ ಕೊಲೆ ಮಾಡಲಾಗಿದೆ. ಇದು ಆರ್ ಟಿ ಐ ಮಾಹಿತಿಯಲ್ಲಿ ಬಹಿರಂಗವಾಗಿದೆ. ಸದನಕ್ಕೆ ಈ ಪ್ರತಿಯನ್ನು ನೀಡಿದ್ದೇನೆ ಎಂದರು.

ಇದನ್ನೂ ಓದಿ : 'ದಿ ಕಾಶ್ಮೀರ್ ಫೈಲ್ಸ್' ತಯಾರಕರಿಗೆ J&K ಕೋರ್ಟ್ ಮಹತ್ವದ ಆದೇಶ.. ಆ ಒಂದು ದೃಶ್ಯ ತೋರಿಸದಿರಲು ಸೂಚನೆ

ಇದಾದ ನಂತರ ನಂತರ ಸಿನಿಮಾ ಕುರಿತು ಮತ್ತೆ ಚರ್ಚಿಸಬೇಡಿ ಎಂದು ಸಭಾಪತಿ ಹೊರಟ್ಟಿ ಪ್ರಶ್ನೋತ್ತರ ಕಲಾಪಗಳಿಗೆ ಅವಕಾಶ ಕಲ್ಪಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News