ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿಕೆ ಶಿವಕುಮಾರ್

“ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್ ಸಿಎಲ್ ಗೆ ಅರ್ಜಿ ಹಾಕಲು ಕೆಎಂಎಫ್ ಗೆ ಸೂಚನೆ ನೀಡಿದ್ದು, 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.

Written by - Bhavishya Shetty | Last Updated : Jun 18, 2025, 01:57 PM IST
    • ಬಿಎಂಆರ್ ಸಿಎಲ್ ಗೆ ಅರ್ಜಿ ಹಾಕಲು ಕೆಎಂಎಫ್ ಗೆ ಸೂಚನೆ
    • ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ
    • ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್ ಸಿಎಲ್ ಗೆ ಅರ್ಜಿ ಹಾಕಲು ಕೆಎಂಎಫ್ ಗೆ ಸೂಚನೆ ನೀಡಿದ್ದು, 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.

Add Zee News as a Preferred Source

ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ:  ಫುಲ್‌ ಟೈಟ್‌ ಆಗಿ ಮೈದಾನಕ್ಕೆ ಬಂದ ಟೀಂ ಇಂಡಿಯಾದ ಈ ಬ್ಯಾಟ್ಸ್‌ಮನ್... ಮದ್ಯದ ಅಮಲಿನಲ್ಲಿ ಸಿಡಿಸಿಯೇ

ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆ ತೆರೆಯುತ್ತಿರುವ ಬಗ್ಗೆ ಕೇಳಿದಾಗ, “ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್ ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮೂಲ್ ಅವರು ಜಾಗತಿಕ ಟೆಂಡರ್ ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆ” ಎಂದು ತಿಳಿಸಿದರು.

“ಇಂದು ಬೆಂಗಳೂರು ನಗರದಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಪಕ್ಷ ಸಂಘಟನೆ ವಿಚಾರ ಹಾಗೂ ಪಾಲಿಕೆ ಚುನಾವಣೆ ಸೇರಿದಂತೆ ಇಂದು ನಮ್ಮ ಪಕ್ಷದ ಶಾಸಕರ ಜತೆ ಚರ್ಚೆ ಮಾಡಿದ್ದೇನೆ. ಜಿಬಿಎಯಲ್ಲಿ ಎಷ್ಟು ಪಾಲಿಕೆ ರಚನೆ ಮಾಡಬೇಕು ಎನ್ನುವ ವಿಚಾರವಾಗಿ ಎಲ್ಲಾ ನಾಯಕರ ಜತೆ ಚರ್ಚೆ ಮಾಡಿದ್ದು, ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಬಾಕಿ ಇದೆ. ಅವರ ವಿಶ್ವಾಸ ಪಡೆದು ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.

“ಸ್ವಚ್ಛ ಬೆಂಗಳೂರು ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕಸವಿರುವ ಜಾಗದ ಫೋಟೋ ತೆಗೆದು ಅದನ್ನು ಈ ಸಂಖ್ಯೆಗೆ ರವಾನಿಸಿದರೆ ಒಂದು ವಾರದಲ್ಲಿ ಆ ಜಾಗದಲ್ಲಿರುವ ಕಸ ವಿಲೇವಾರಿ ಮಾಡಲಾಗುವುದು. ಇನ್ನು ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ ಶಾಸಕರು ತಮ್ಮ ಕ್ಷೇತ್ರಗಳ ವಾರ್ಡ್ ಗಳ ಬಗ್ಗೆ ಗಮನಹರಿಸಿ ರಸ್ತೆ ಕಾಮಗಾರಿಗೆ ಅನುದಾನವನ್ನು ನೀಡುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಆಸ್ತಿ ಖಾತಾ ದಾಖಲೆ ವಿತರಣೆ ಆಂದೋಲನ: 
“ಇನ್ನು ಬೆಂಗಳೂರಿನಲ್ಲಿ ಆಸ್ತಿ ಖಾತಾ ದಾಖಲೆ ಆಂದೋಲನ ರೂಪಿಸಲಾಗಿದ್ದು, ಜುಲೈ ತಿಂಗಳಿನಿಂದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದ್ದು, 25 ಸಾವಿರ ಆಸ್ತಿಗಳ ಖಾತಾ ದಾಖಲೆಗಳು ಸಿದ್ಧಗೊಂಡಿದ್ದು, ಜುಲೈ ಒಂದರಿಂದ ಇಡೀ ತಿಂಗಳು ಈ ಆಸ್ತಿ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಮನೆಗಳು ಆಸ್ತಿಗಳಿದ್ದು, ಈ ಪೈಕಿ 5 ಲಕ್ಷ ಮಂದಿ ದಾಖಲೆ ಅಪ್ ಲೋಡ್ ಮಾಡಿದ್ದಾರೆ. ಇನ್ನು 20 ಲಕ್ಷ ಆಸ್ತಿಗಳ ದಾಖಲೆ ಬಾಕಿ ಇದೆ” ಎಂದು ತಿಳಿಸಿದರು.

ಇ ಖಾತಾ ವಿಚಾರವಾಗಿ ಅಭಿಯಾನ ಮಾಡಲಾಗುವುದೇ ಎಂದು ಕೇಳಿದಾಗ, “ಜುಲೈ 1 ರಿಂದ ಇ ಖಾತಾ ವಿಚಾರವಾಗಿ ಆಂದೋಲನ ಮಾಡಲಾಗುವುದು. ಆಮೂಲಕ ಖಾಸಗಿ ಆಸ್ತಿ ಮಾಲೀಕರು ಜಾಗೃತಿ ವಹಿಸಿ, ತಮ್ಮ ದಾಖಲೆಗಳನ್ನು ನೀಡಿ ಇ ಖಾತಾ ಮಾಡಿಸಿಕೊಳ್ಳಲು ಒಂದು ತಿಂಗಳ ಕಾಲ ಆಂದೋಲನ ಹಮ್ಮಿಕೊಳ್ಳಲಾಗುವುದು. ಈ ವಿಚಾರವಾಗಿ ಮನೆ ಮನೆ ಪ್ರಚಾರ, ಜಾಹೀರಾತು ಸೇರಿದಂತೆ ಪ್ರಚಾರ ಮಾಡಲಾಗುವುದು” ಎಂದು ತಿಳಿಸಿದರು.

ವೈಟ್ ಟ್ಯಾಪಿಂಗ್ ಯೋಜನೆಗಳ ಬಗ್ಗೆ ಕೇಳಿದಾಗ, “ಇನ್ನು ನಗರದಲ್ಲಿ ವೈಟ್ ಟ್ಯಾಪಿಂಗ್ ಕೆಲಸ ನಡೆಯುತ್ತಿದೆ. ಅನೇಕ ಕಡೆಗಳಲ್ಲಿ ನಾನೇ ಕಾಮಗಾರಿ ಗುಣಮಟ್ಟ ಪರೀಕ್ಷೆ ಮಾಡಿದ್ದೇನೆ. ಕೆಲವು ಕಡೆ ಕಾಮಗಾರಿ ಪ್ರಗತಿಯಲ್ಲಿವೆ” ಎಂದರು. 

ಮಳೆಯಿಂದಾಗಿ ಮರ ಬೀಳುತ್ತಿದ್ದರೂ ಬಿಬಿಎಂಪಿ ಸುಮ್ಮನೆ ಇದೆ ಎಂದು ಕೇಳಿದಾಗ, “ಅಧಿಕಾರಿಗಳು ಸುಮ್ಮನೆ ಕೂತಿಲ್ಲ. ಆದ್ಯತೆ ಮೇರೆಗೆ ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ:  ನಿತ್ಯ ಕುಡಿಯುವ ಅಭ್ಯಾಸವಿದ್ದರೂ ಮಾರನೇ ದಿನ ಬೆಳಿಗ್ಗೆ ಈ ಹಣ್ಣು ತಿನ್ನಿ ! ವರ್ಷಾನುಗಟ್ಟಲೆ ಆರೋಗ್ಯವಾಗಿಯೇ ಇರುವುದು ನಿಮ್ಮ ಲಿವರ್ 

ಬಿ ಖಾತಾ ನೀಡುವ ವಿಚಾರವಾಗಿ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಕಾನೂನು ಆಯಾಮಗಳ ಚರ್ಚೆ ಮಾಡಿ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News