ಕೊಪ್ಪಳ: ಬೆಂಗಳೂರು ಸಾರಿಗೆ ಇಲಾಖೆಯ ಆಯುಕ್ತರ ಕಚೇರಿಯ ಸುತ್ತೋಲೆಯಂತೆ ಸಾರಿಗೆ ಇಲಾಖೆಯ ಸಂಪರ್ಕರಹಿತ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಸಾರಥಿ-4 ತಂತ್ರಾಂಶವನ್ನು ಬಳಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ-Pots Office ಈ ಯೋಜನೆಯಲ್ಲಿ ₹150 ಉಳಿತಾಯ ಮಾಡಿ ₹20 ಲಕ್ಷ ಲಾಭ ಪಡೆಯಿರಿ!
ಕಲಿಕಾ ಪರವಾನಿಗೆ ಎಲ್ಲಾ ಸೇವೆಗಳು, ಚಾಲನಾ ಅನುಜ್ಞಾ ಪತ್ರ ನವೀಕರಣ, ಚಾಲನಾ ಅನುಜ್ಞಾ ಪತ್ರದಲ್ಲಿ ವಿಳಾಸ ಬದಲಾವಣೆ, ಚಾಲನಾ ಅನುಜ್ಞಾ ಪತ್ರದಲ್ಲಿ ಹೆಸರು ಬದಲಾವಣೆ, ಚಾಲನಾ ಅನುಜ್ಞಾ ಪತ್ರದ ನಕಲಿ ಪ್ರತಿ ಸೇವೆಗಳಿಗೆ ಸಾರಥಿ-4 ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕವೇ ಅರ್ಜಿ ನೋಂದಾಯಿಸಿ ಸಂಬಂಧಿಸಿದ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಇಲಾಖೆಯ ಸೇವೆಗಳನ್ನು ಪಡೆಯಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ.
ಆದ್ದರಿಂದ ಇಲಾಖೆಯ ಜಾಲತಾಣ www.parivahan.gov.in ನಲ್ಲಿ ಸಂಪರ್ಕ ರಹಿತವಾಗಿ ಸಾರಿಗೆ ಇಲಾಖೆ ಸೇವೆಗಳನ್ನು ಪಡೆಯಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.