ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಸ್ಥಾಪಕ ಸಂಪಾದಕ ರವಿ ಬೆಳಗೆರೆಯ ಮಧ್ಯಂತರ ಜಾಮೀನು ಅವಧಿಯನ್ನು ಸಿಟಿ ಸಿವಿಲ್ ನ್ಯಾಯಾಲಯ 2 ದಿನಗಳ ಕಾಲ ವಿಸ್ತರಿಸಿದೆ.


COMMERCIAL BREAK
SCROLL TO CONTINUE READING

ಈ ಹಿಂದೆ ಕೊಲೆಗೆ ಸುಪಾರಿ ಪ್ರಕರಣದಲ್ಲಿ ರವಿ ಬೆಳಗೆರೆಗೆ ಕೋರ್ಟ್ ಮೂರು ದಿನಗಳ ಷರತ್ತುಬದ್ಧ ಜಾಮೀನು ನೀಡಿತ್ತು. ಇಂದು ಜಾಮೀನು ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ ಜಾಮೀನು ಅರ್ಜಿಗೆ ಬೆಳಗೆರೆ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.


ನ್ಯಾಯಾಧೀಶ ಮಧುಸೂದನ್ ಅವರು ಪತ್ರಕರ್ತ ಬೆಳಗೆರೆ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಿ ಆದೇಶ ನೀಡಿದರು. ರವಿ ಬೆಳಗೆರೆ ಆರೋಗ್ಯ ಸ್ಥಿತಿ ಸರಿಯಿಲ್ಲದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈಗ ಅದೇ ಅದೇ ಆಧಾರದ ಮೇಲೆ ಅವಧಿ ವಿಸ್ತರಿಸಿದ್ದು, ಸದ್ಯ ರವಿ ಬೆಳಗೆರೆ ಜಯದೇವ ಆಸ್ಪತ್ರೆಯ ಐಸಿಯೂ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.