ಬೆಂಗಳೂರು: ರಾಜ್ಯದ ವಿಧಾನ ಸಭಾ ಚುನವಾಣೆ ಫಲಿತಾಂಶದಲ್ಲಿ ಎಲ್ಲೆಡೆ ಕಾಂಗ್ರೆಸ್‌ ಪಕ್ಷವು ನೀರಿಕ್ಷೆಗಿಂತಲೂ ಹೆಚ್ಚಿನ ಬಹುಮತ ಗಳಿಸಿ, ಬೆಜೆಪಿ, ಜೆಡಿಎಸ್‌ ಸೇರಿದಂತೆಯೇ ಇತರೆ ಪಕ್ಷಗಳ ಮತಗಳಿಕೆ ಹಿಂದಕ್ಕಿದೆ. ಈ ನಿಟ್ಟಿನಲ್ಲಿ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿಯವರು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆನಡೆಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Mangalore Assembly Constituency: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ!


ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಬಸವರಾಜ ಬೊಮ್ಮಾಯಿ, ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ.


ಬರುವ ಮುಂದಿನ  ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ.‌ ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.


ಇದನ್ನೂ ಓದಿ: Puttur Assembly Constituency : ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಪೋಸ್ಟರ್‌ ವೈರಲ್‌ !


ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ  ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದರು. ಸದ್ಯ ಈ ಸಭೆಯಲ್ಲಿ  ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.