ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿಯಲ್ಲಿ ಧಾರವಾಡ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಇಂದಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಸೇರಿ ಸುಮಾರು 95 ಸಾವಿರ ಜನರು ಪ್ರತ್ಯಕ್ಷವಾಗಿ  ಭಾಗವಹಿಸಿ, ಕಾರ್ಯಕ್ರಮವನ್ನು ಅಭೂತ ಪೂರ್ವವಾಗಿ ಯಶಸ್ವಿಗೊಳ್ಳಿಸಿದ್ದಾರೆ.

Written by - Manjunath N | Last Updated : Sep 15, 2024, 07:09 PM IST
  • ರಾಜ್ಯದ 31 ಜಿಲ್ಲೆಗಳಿಂದ ಒಟ್ಟು 25,35,223 ಜನರು ಪ್ರಜಾಪ್ರಭುತ್ವ ದಿನಾಚರಣೆಗೆ ಆನ್‍ಲೈನ್ ಮೂಲಕ ನೋಂದಾಯಿಸಿಕೊಂಡಿದ್ದು,
  • ಈ ಪೈಕಿ ಧಾರವಾಡ ಜಿಲ್ಲೆಯಿಂದಲೇ ಸುಮಾರು 3,57,555 ಜನ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ರಾಜ್ಯ ಪ್ರಥಮರಾಗಿದ್ದಾರೆ.
 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿಯಲ್ಲಿ ಧಾರವಾಡ ಜಿಲ್ಲೆ ರಾಜ್ಯಕ್ಕೆ ಪ್ರಥಮ title=

ಸಂವಿಧಾನ, ಪ್ರಜಾಪ್ರಭುತ್ವ, ಮಾನವ ಹಕ್ಕು, ಶಿಕ್ಷಣ ಕ್ಷೇತ್ರಗಳಲ್ಲಿ ಸದಾ ಕಾಲ ತನ್ನದೇ ಚಾಪು ಮೂಡಿಸುವ ಧಾರವಾಡ ಜಿಲ್ಲೆ ಇಂದಿನ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅತಿ ಹೆಚ್ಚು ಜನರು ಭಾಗವಹಿಸುವ ಮೂಲಕ ರಾಜ್ಯಕ್ಕೆ ಪ್ರಥಮರಾಗಿ ದಾಖಲೆ ರೂಪಿಸಿದ್ದಾರೆ.

ಇದನ್ನೂ ಓದಿ: Instagram Reels ಮಾಡಿ 15 ಸಾವಿರ ರೂ, ಗೆಲ್ಲಿ..! ರಾಜ್ಯ ಸರ್ಕಾರದಿಂದ ಬಂಪರ್ ಆಫರ್ ..!

ಇಂದಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಸೇರಿ ಸುಮಾರು 95 ಸಾವಿರ ಜನರು ಪ್ರತ್ಯಕ್ಷವಾಗಿ  ಭಾಗವಹಿಸಿ, ಕಾರ್ಯಕ್ರಮವನ್ನು ಅಭೂತ ಪೂರ್ವವಾಗಿ ಯಶಸ್ವಿಗೊಳ್ಳಿಸಿದ್ದಾರೆ.

ರಾಜ್ಯದ 31 ಜಿಲ್ಲೆಗಳಿಂದ  ಒಟ್ಟು 25,35,223 ಜನರು ಪ್ರಜಾಪ್ರಭುತ್ವ ದಿನಾಚರಣೆಗೆ ಆನ್‍ಲೈನ್ ಮೂಲಕ ನೋಂದಾಯಿಸಿಕೊಂಡಿದ್ದು, ಈ ಪೈಕಿ ಧಾರವಾಡ ಜಿಲ್ಲೆಯಿಂದಲೇ ಸುಮಾರು 3,57,555 ಜನ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ರಾಜ್ಯ ಪ್ರಥಮರಾಗಿದ್ದಾರೆ.

ಇದನ್ನೂ ಓದಿ: ಬಿಳಿಗಿರಿರಂಗನ ಬೆಟ್ಟ ಸೇರಿದಂತೆ 3 ಕಡೆ ಹೊಸ ಪ್ರಬೇಧದ ಜೀರುಂಡೆ ಪತ್ತೆ

ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯಿಂದ 47.965 ಜನ ವೈಯಕ್ತಿಕವಾಗಿ, ಸುಮಾರು 1914 ಸರ್ಕಾರೇತ ಸಂಸ್ಥೆಗಳು ಮತ್ತು ಇತರ ಸಂಘಟನೆಗಳ 3,07,717 ವ್ಯಕ್ತಿಗಳು, ವಲಸಿಗರು ಸೇರಿ ವಿವಿಧ ರೀತಿಯ ಟ್ರಾವೆಲರ್ 129 ಕುಟುಂಬಗಳ 1,873 ಜನರು ರಾಜ್ಯ ಸರ್ಕಾರದ ಆನ್‍ಲೈನ್ www.democracyday.karnataka.in ಮೂಲಕ ರಾಜ್ಯದ ಇತರ ಜಿಲ್ಲೆಗಳಿಗಿಂತ ಅತಿ ಹೆಚ್ಚು 50,008 ಜನ ಪ್ರಜಾಪ್ರಭುತ್ವ ದಿನಾಚರಣೆ ಬೆಂಬಲಿಸಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಮತ್ತು ಒಟ್ಟಾರೆಯಾಗಿ ಇಂದಿನ ಪ್ರಜಾಪ್ರಭುತ್ವ ಹಾಗೂ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಧಾರವಾಡ ಜಿಲ್ಲೆಯಿಂದ 3,57,555 ಜನರು ಭಾಗವಹಿಸಿದ್ದಾರೆ ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ. 

ಸದರಿ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ಸೂಚಿಸಿದ ಜಿಲ್ಲೆಯ ಎಲ್ಲ ನಾಗರೀಕರಿಗೆ, ಸಂಘ ಸಂಸ್ಥೆಗಳಿಗೆ ಮತ್ತು ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದ ಎಲ್ಲ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಅಭಿನಂದಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News