InternationalDayOfYoga: ಮೈಸೂರಿನಲ್ಲಿ 'ನಮೋ' ಯೋಗ

ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ  ನಡೆಯುತ್ತಿದೆ. ಇವು ಭಾರತದ ಇತಿಹಾಸ ಮತ್ತು ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ ಎಂದವರು ಬಣ್ಣಿಸಿದರು.

Written by - Yashaswini V | Last Updated : Jun 21, 2022, 09:02 AM IST
  • ವಿಶ್ವದ ವಿವಿಧೆಡೆ ಸೂರ್ಯರಶ್ಮಿ ಸ್ಪರ್ಶವಾಗುವ ಹೊತ್ತಿಗೆ ಯೋಗದಿನದ ಕಾರ್ಯಕ್ರಮಗಳು ನಡೆಯುತ್ತಿವೆ.
  • ಈ ಪ್ರಯೋಗವು ವಿಶ್ವಮಟ್ಟದಲ್ಲಿ ಗಾರ್ಡಿಯನ್ ರಿಂಗ್ ಆಫ್ ಯೋಗ ಹೆಸರಿನಲ್ಲಿ ಜನಜನಿತವಾಗಿದೆ.
  • ಯೋಗ ಎನ್ನುವುದು ಕೇವಲ ಜೀವನದ ಭಾಗ ಅಲ್ಲ. ಅದು ಜೀವನದ ರೀತಿ ಆಗುತ್ತಿದೆ- ಪ್ರಧಾನಿ ಮೋದಿ
InternationalDayOfYoga: ಮೈಸೂರಿನಲ್ಲಿ 'ನಮೋ' ಯೋಗ title=
PM Narendra Modi Yoga magic at Mysuru

ಮೈಸೂರು: ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ ಯೋಗ ದಿನದ ಶುಭಾಶಯಗಳು. ಯೋಗದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಆಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ಪ್ರಣಾಮ ಮಾಡುತ್ತೇನೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾತುಗಳನ್ನು ಆರಂಭಿಸಿದರು.

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ಅರಮನೆಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ  ಅವರು,  ಭಾರತವು ಸದಾ ವಿಶ್ವದ ಒಳಿತು ಬಯಸುತ್ತದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. ಮಾನವತೆಗೆ ಯೋಗ ಎನ್ನುವುದು ಈ ವರ್ಷದ ಆಶಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ ಅಷ್ಟೇ ಅಲ್ಲ ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು  ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ  ನಡೆಯುತ್ತಿದೆ. ಇವು ಭಾರತದ ಇತಿಹಾಸ ಮತ್ತು ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ ಎಂದವರು ಬಣ್ಣಿಸಿದರು.

ಇದನ್ನೂ ಓದಿ- International Yoga Day 2022: ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗ!

ವಿಶ್ವದ ವಿವಿಧೆಡೆ ಸೂರ್ಯರಶ್ಮಿ ಸ್ಪರ್ಶವಾಗುವ ಹೊತ್ತಿಗೆ  ಯೋಗ ದಿನದ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯೋಗವು ವಿಶ್ವಮಟ್ಟದಲ್ಲಿ ಗಾರ್ಡಿಯನ್ ರಿಂಗ್ ಆಫ್ ಯೋಗ ಹೆಸರಿನಲ್ಲಿ ಜನಜನಿತವಾಗಿದೆ. ಯೋಗ ಎನ್ನುವುದು ಕೇವಲ ಜೀವನದ ಭಾಗ ಅಲ್ಲ. ಅದು ಜೀವನದ ರೀತಿ ಆಗುತ್ತಿದೆ ಎಂದು ಪ್ರಧಾನಿ ಮೋದಿ ಯೋಗದ ಮಹತ್ವವನ್ನು ಸಾರಿದರು.

ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸ - ಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್​ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ- ಅಂತಾರಾಷ್ಟ್ರೀಯ ಯೋಗ ದಿನ 2022: ಗ್ರಹಗಳ ಮೆಚ್ಚಿಸಲು ಈ ರೀತಿ ಯೋಗ ಮಾಡಿ

ಮೂರು ಬಾರಿ ಓಂಕಾರ ಉಚ್ಚಾರಣೆಯೊಂದಿಗೆ ಯೋಗದಿನದ ಪ್ರಯುಕ್ತ ನಡೆಯುತ್ತಿರುವ ವಿಶೇಷ ಯೋಗಾಭ್ಯಾಸ ಆರಂಭವಾಯಿತು. ಸಂಸ್ಕೃತದ ಶ್ಲೋಕವೊಂದರ ಮೂಲಕ ಪ್ರಾರ್ಥನೆ ಮಾಡಲಾಯಿತು.

ಯೋಗ ದಿನದ ಸ್ವಾಗತ ಭಾಷಣ ಮಾಡಿದ ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಮೈಸೂರಿನ ಗುಣಗಾನ ನಡೆಸಿದರು. ಅಲ್ಲದೇ ಯೋಗ ದಿನದ ಮಹತ್ವ ಸಾರಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ಎಲ್ಲರಿಗೂ ಯೋಗ ದಿನಾಚರಣೆಯ ಶುಭಾಶಯ ಕೋರಿದರು. ಯೋಗ ಅಂತಾರಾಷ್ಟ್ರೀಯ ದಿನಾಚರಣೆಯಾಗಲು ಮೋದಿ ಪಾತ್ರ ದೊಡ್ಡದು ಎಂದು ಬಣ್ಣಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News